ಜೈಶ್-ಇ-ಮೊಹಮ್ಮದ್ ಸಂಘಟನೆಯ ಪುನಶ್ಚೇತನಕ್ಕೆ ಇಎಸ್ಇ ಪ್ರಯತ್ನ

ಕಾಶ್ಮೀರ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆಯಾಗುತ್ತಿರುವ ಭೀತಿಯ ವಾತಾವರಣದ ನಡುವೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕಾಶ್ಮೀರ ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆಯಾಗುತ್ತಿರುವ ಭೀತಿಯ ವಾತಾವರಣದ ನಡುವೆ ಪಾಕಿಸ್ತಾನದ ಬೇಹುಗಾರಿಕಾ ಇಎಸ್ ಇ ಸಂಘಟನೆ ಜೈಶ್-ಇ-ಮೊಹಮ್ಮದ್ ಸಂಘಟನೆಯನ್ನು ಪುನಶ್ಚೇತನಗೊಳಿಸಲು ಪ್ರಯತ್ನಿಸುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.

ಇದೇ ಜೈಶ್-ಇ-ಮೊಹಮ್ಮದ್ ಸಂಘಟನೆ 2001ರಲ್ಲಿ ಭಾರತದ ಸಂಸತ್ತು ಮೇಲೆ ದಾಳಿ ನಡೆಸಿದ ಭಯೋತ್ಪಾದಕ ಸಂಘಟನೆಯಾಗಿದೆ.

ಭಾರತದ ವಿದೇಶಿ ಗುಪ್ತಚರ ಸಂಸ್ಥೆ ನೀಡಿರುವ ಮಾಹಿತಿ ಪ್ರಕಾರ, ಇಎಸ್ಇಯು ಜೈಶ್-ಇ-ಮೊಹಮ್ಮದ್ ಸಂಘಟನೆಯನ್ನು ಬಳಸಿಕೊಂಡು ಜಮ್ಮ-ಕಾಶ್ಮೀರ ಸೇರಿದಂತೆ ಭಾರತದ ಇತರ ಕಡೆಗಳಲ್ಲಿ ದಾಳಿ ನಡೆಸಲು ಪ್ರಯತ್ನಿಸುತ್ತಿದೆ ಎಂಬುದು ತಿಳಿದುಬಂದಿದೆ.

ಈ ಹಿಂದೆ ಜೈಶಿ ಸಂಘಟನೆ ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸಿ ಪಾಕಿಸ್ತಾನ ಇಎಸ್ ಇಯ ಸಿಟ್ಟಿಗೆ ಕಾರಣವಾಗಿತ್ತು. ಇದೀಗ ಅದರ ಜೊತೆ ಒಂದಾಗಲು ಯತ್ನಿಸುತ್ತಿದೆ. ಪಾಕಿಸ್ತಾನ 2002ರಲ್ಲಿ ಜೈಶ್-ಇ-ಮೊಹಮ್ಮದ್ ಸಂಘಟನೆಯನ್ನು ನಿಷೇಧಿಸಿತ್ತು. ಆದರೂ ಕೂಡ ಉಗ್ರಗಾಮಿ ಸಂಘಟನೆ ದೇಶದಲ್ಲಿ ಹಲವಾರು ಕಾರ್ಯನಿರ್ವಹಣೆಯನ್ನು ಮುಂದುವರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com