
ನವದೆಹಲಿ: ದೇಶದ ನಗರ ಪ್ರದೇಶಗಳಲ್ಲಿ ನೀರು ಪೂರೈಕೆಯನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲ ನಗರಗಳಲ್ಲೂ ಸರ್ಕಾರಿ ಖಾಸಗಿ ಸಹಭಾಗಿತ್ವದಲ್ಲಿ ನೀರು ಪೂರೈಸುವ ಯೋಜನೆಯನ್ನು ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಸಿದ್ಧಪಡಿಸಿದೆ.
ಪ್ರಸ್ತಾವಿತ 100 ಸ್ಮಾರ್ಟ್ ಸಿಟಿಗಳು ಮತ್ತು ಅಮೃತ್ ಯೋಜನೆಯಡಿ ಬರುವ 500 ನಗರಗಳಲ್ಲಿ ಮೊದಲಿಗೆ ಈ ಯೋಜನೆ ಜಾರಿ ಮಾಡಲು ಚಿಂತನೆ ನಡೆಸಲಾಗಿದೆ. ಮುಂದಿನ ಕೆಲವೇ ತಿಂಗಳಲ್ಲಿ ಇದರ ಮಾದರಿಯು ಅಂತಿಮಗೊಳ್ಳಲಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.
ಈ ಯೋಜನೆ ಜಾರಿಯಾದರೆ, ನೀರು ಪೂರೈಕೆಯ ನಿಗದಿತ ಶುಲ್ಕ, ಮನೆ ಮನೆಗೂ ನೀರಿನ ಸಂಪರ್ಕ ಸೇರಿದಂತೆ ಬಹುತೇಕ ವಿಚಾರಗಳಲ್ಲಿ ಖಾಸಗಿಯವರೇ ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದೂ ಸಚಿವಾಲಯ ಮಾಹಿತಿ ನೀಡಿದೆ ಎಂದು ಖಾಸಗಿ ಪತ್ರಿಕೆಯೊಂದು ವರದಿ ಮಾಡಿದೆ.
Advertisement