ಶಾರ್ಕ್ ದಾಳಿಗಿಂತ ಸೆಲ್ಫೀ ಹುಚ್ಚಿಗೆ ಬಲಿಯಾದವರು ಹೆಚ್ಚು

ಕಳೆದ ವರ್ಷ ಶಾರ್ಕ್ ದಾಳಿಗಿಂತ ಸೆಲ್ಫೀ ತೆಗೆದುಕೊಳ್ಳಲು ಹೋಗಿ ಹೆಚ್ಚು ಸಾವನ್ನಪ್ಪಿದ್ದಾರೆ ಎಂದು ವರದಿಯೊಂದು ತಿಳಿಸಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕಳೆದ ವರ್ಷ ಶಾರ್ಕ್ ದಾಳಿಗಿಂತ ಸೆಲ್ಫೀ ತೆಗೆದುಕೊಳ್ಳಲು ಹೋಗಿ ಹೆಚ್ಚು ಸಾವನ್ನಪ್ಪಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಸೆಲ್ಫೀ ತೆಗೆದುಕೊಳ್ಳಲು ಹೋಗಿ ಸುಮಾರು 12 ಜನ ತಮ್ಮ ಜೀವ ಕಳೆದುಕೊಂಡಿದ್ದಾರೆ. ಆದರೆ ಶಾರ್ಕ್ ಗೆ ದಾಳಿಯಿಂದ 8 ಮಂದಿ ಮೃತ ಪಟ್ಟಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಇತ್ತೀಚೆಗೆ 55 ವರ್ಷದ ಜಪಾನ್ ಪ್ರಜೆಯೊಬ್ಬ ತಾಜ್ ಮಹಲ್ ಗೆ ಭೇಟಿ ನೀಡಿ ಅಲ್ಲಿ ಸೆಲ್ಫೀ ತೆಗೆದುಕೊಳ್ಳಲು ಹೋಗಿ ಕೆಳಗೆ ಬಿದ್ದು ಸಾವನ್ಪಪ್ಪಿರುವುದಾಗಿ ಪತ್ರಿಕೆ ತಿಳಿಸಿದೆ.

ಇನ್ನು ಮಿಸಿಸಿಪ್ಪಿಯ ಮಹಿಳೆಯೊಬ್ಬಳು ಯೆಲ್ಲೋ ಸ್ಟೋನ್ ನ್ಯಾಷನಲ್ ಪಾರ್ಕಿನಲ್ಲಿ  ಪ್ರಾಣಿಗಳ ಹತ್ತಿರದಿಂದ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಡೆಮ್ಮೆಗೆ ಬಲಿಯಾಗಿರುವ ವರದಿಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com