ಸೋಮನಾಥ್ ಭಾರ್ತಿ
ಸೋಮನಾಥ್ ಭಾರ್ತಿ

ಸೋಮನಾಥ್ ಭಾರ್ತಿ ಜಾಮೀನು ಅರ್ಜಿ ಸೋಮವಾರ ಸುಪ್ರೀಂನಲ್ಲಿ ವಿಚಾರಣೆ

ಕೌಟುಂಬಿಕ ದೌರ್ಜನ್ಯ ಹಾಗೂ ಕೊಲೆ ಯತ್ನ ಆರೋಪ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷದ ಶಾಸಕ ಹಾಗೂ ಮಾಜಿ ಸಚಿವ ಸೋಮನಾಥ್ ಭಾರ್ತಿ ಅವರು ಸಲ್ಲಿಸಿದ್ದ...

ನವದೆಹಲಿ: ಕೌಟುಂಬಿಕ ದೌರ್ಜನ್ಯ ಹಾಗೂ ಕೊಲೆ ಯತ್ನ ಆರೋಪ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷದ ಶಾಸಕ ಹಾಗೂ ಮಾಜಿ ಸಚಿವ ಸೋಮನಾಥ್ ಭಾರ್ತಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಸ್ವೀಕರಿಸಿದ್ದು, ಸೋಮವಾರ ವಿಚಾರಣೆ ನಡೆಸಲಿದೆ.

ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಭಾರತಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮುಖ್ಯ ನಾಯಮೂರ್ತಿ ಎಚ್.ಎಲ್.ದತ್ತು ಹಾಗೂ ನ್ಯಾಯಮೂರ್ತಿ ಅಮಿತವ ರಾಯ್ ಅವರನ್ನೊಳಗೊಂಡ ಸುಪ್ರೀಂ ಪೀಠ ಸೆಪ್ಟೆಂಬರ್ 28ಕ್ಕೆ ವಿಚಾರಣೆ ನಿಗದಿಪಡಿಸಿದೆ.

ಭಾರ್ತಿ ವಿರುದ್ಧ ಪತ್ನಿ ಲಿಪಿಕಾ ಭಾರ್ತಿ ಅವರು ತಮ್ಮ ಮೇಲೆ ದೈಹಿಕ ಹಾಗೂ ಮಾನಸಿಕ ಹಿಂಸೆ ಮತ್ತು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ.

ಸೋಮನಾಥ ಭಾರ್ತಿ ಮದುವೆಯಾದಾಗಿನಿಂದಲೂ ತಮಗೆ ದೈಹಿಕ ಹಿಂಸೆ ನೀಡುತ್ತಿದ್ದರು. ಅಲ್ಲದೆ ಒಮ್ಮೆ ಕೊಲೆಗೂ ಯತ್ನ ನಡೆಸಿದ್ದರು ಎಂದು ಲಿಪಿಕಾ ದೂರಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com