ಕಿರ್ಕಿ ದಾಳಿ ಪ್ರಕರಣ: ಭಾರ್ತಿ ವಿರುದ್ಧ ಕಾನೂನು ಕ್ರಮಕ್ಕೆ ದೆಹಲಿ ಸರ್ಕಾರ ಅನುಮತಿ

ಕೌಟುಂಬಿಕ ದೌರ್ಜನ್ಯ ಪ್ರಕರಣದಡಿಯಲ್ಲಿ ಬಂಧನದ ಭೀತಿಯಿಂದ ತಲೆ ಮರೆಸಿಕೊಂಡಿರುವ ಆಮ್ ಆದ್ಮಿ ಪಕ್ಷದ ಶಾಸಕ ಹಾಗೂ ಮಾಜಿ ಕಾನೂನು ಸಚಿವ ...
ಸೋಮನಾಥ ಭಾರ್ತಿ
ಸೋಮನಾಥ ಭಾರ್ತಿ

ನವದೆಹಲಿ: ಕೌಟುಂಬಿಕ ದೌರ್ಜನ್ಯ ಪ್ರಕರಣದಡಿಯಲ್ಲಿ ಬಂಧನದ ಭೀತಿಯಿಂದ ತಲೆ ಮರೆಸಿಕೊಂಡಿರುವ ಆಮ್ ಆದ್ಮಿ ಪಕ್ಷದ ಶಾಸಕ ಹಾಗೂ ಮಾಜಿ ಕಾನೂನು ಸಚಿವ ಸೋಮನಾಥ್ ಭಾರ್ತಿ ವಿರುದ್ಧ ಕಿರ್ಕಿ ದಾಳಿ ಪ್ರಕರಣದಲ್ಲಿ ಕಾನೂನು ಕ್ರಮ ಜರುಗಿಸಲು ದೆಹಲಿ ಸರ್ಕಾರ ಅನುಮತಿ ನೀಡಿದೆ.

ಆದರೆ ಈ ಸಂಬಂಧ ಇದುವರೆಗೂ ದೆಹಲಿಯ ಆಮ್ ಆದ್ಮಿ ಸರ್ಕಾರದಿಂದ ಅಧಿಕೃತ ಆದೇಶ ಇನ್ನೂ ಸಿಕ್ಕಿಲ್ಲ. ಕೌಟುಂಬಿಕ ದೌರ್ಜನ್ಯ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿದ ಹಿನ್ನೆಲೆಯಲ್ಲಿ ಭಾರ್ತಿ ಪರ ವಕೀಲರು ಸುಪ್ರಿಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಈ ಸಂಬಂಧ ಪ್ರತಿಕ್ರಿಯಿಸಿರುವ ಸೋಮನಾಥ್ ಭಾರ್ತಿ ಪರ ವಕೀಲ, ಜಾಮೀನಿಗಾಗಿ ಸುಪ್ರಿಂಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದೇವೆ. ತೀರ್ಪು ಬರುವವರೆಗೂ ದೆಹಲಿ ಪೊಲೀಸರು ಸೋಮನಾಥ್ ಭಾರ್ತಿ ಕುಟುಂಬಸ್ಥರು ಹಾಗೂ ಸಂಬಂಧಿಕರು ಮತ್ತು ಸಿಬ್ಬಂದಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com