

ನವದೆಹಲಿ: ಅವರಿಗೆ ಜೆ.ಎನ್.ಯು ವಿಶ್ವವಿದ್ಯಾನಿಲಯದ ಉಪಕುಲಪತಿ ಸ್ಥಾನದ ಜವಾಬ್ದಾರಿ ತೆಗೆದುಕೊಳ್ಳಲು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಅವರಿಗೆ ಆಹ್ವಾನ ನೀಡಿದೆ.
ಮಾಧ್ಯಮಗಳ ವರದಿಗಳ ಪ್ರಕಾರ ಕುಲಪತಿ ಸುಬ್ರಹ್ಮಣಿಯನ್ ಸ್ವಾಮಿ ಷರತ್ತು ವಿಧಿಸಿದ್ದು ಷರತ್ತುಗಳನ್ನು ಪೂರೈಸಿದರೆ ಉಪಕುಲಪತಿ ಸ್ಥಾನವನ್ನು ಒಪ್ಪಿಕೊಳ್ಳುವುದಾಗಿ ಟ್ವೀಟ್ ಮಾಡಿದ್ದಾರೆ. ಆಹ್ವಾನದ ಬಗ್ಗೆ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಸುಬ್ರಹ್ಮಣಿಯನ್ ಸ್ವಾಮಿ ಅವರೊಂದಿಗೆ ಮಾತನಾಡಿದ್ದಾರೆ ಎಂಬ ಮಾಹಿತಿ ದೊರೆತಿದೆ. ಆದರೆ ಉಪಕುಲಪತಿ ವಿಷಯದ ಬಗ್ಗೆ ಅಧಿಕೃತ ಮಾತುಕತೆ ನಡೆದಿಲ್ಲ.
ಹಾಲಿ ಉಪಕುಲಪತಿ ಎಸ್.ಕೆ ಸೊಫೋರ್ ಮುಂದಿನ ವರ್ಷ ಜನವರಿಯಲ್ಲಿ ನಿವೃತ್ತರಾಗಲಿರುವ ಹಿನ್ನೆಲಯಲ್ಲಿ ಹೊಸ ಉಪಕುಲಪತಿಗಳಿಗಾಗಿ ಹುಡುಕಾಟ ನಡೆದಿದೆ. ಶೋಧನಾ ಸಮಿತಿ ಅಸ್ಥಿತ್ವಕ್ಕೆ ಬರುವುದಕ್ಕೂ ಮುನ್ನವೇ ಸುಗ್ರಹ್ಮಣಿಯನ್ ಸ್ವಾಮಿ ಅವರಿಗೆ ಉಪಕುಲಪತಿ ಹುದ್ದೆ ನೀಡುವ ಪ್ರಸ್ತಾವನೆ ಕೇಳಿಬಂದಿದೆ.