

ಮಧುರೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನೇತೃತ್ವದ ಸರಕಾರ ಮಹಿಳಾ ವಿರೋಧಿಯಾಗಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಹಲವು ಪಟ್ಟು ಹೆಚ್ಚಳವಾಗಿವೆ ಎಂದು ಡಿಎಂಕೆ ಮುಖಂಡ ಎಂ.ಕೆ.ಸ್ಟಾಲಿನ್ ಆರೋಪಿಸಿದ್ದಾರೆ.
ಜಯಲಲಿತಾ ಅಧಿಕಾರವಧಿಯಲ್ಲಿ 380 ಮಹಿಳೆಯರು ವರದಕ್ಷಿಣೆ ದಾಹಕ್ಕೆ ಬಲಿಯಾಗಿದ್ದಾರೆ. ಡಿಎಂಕೆ ಪಕ್ಷ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಿದ ಜನಪರ ಕಾರ್ಯಕ್ರಮಗಳನ್ನು ಸೇಡಿನಿಂದಾಗಿ ಕೈ ಬಿಡಲಾಗಿದೆ ಎಂದು ದೂರಿದರು. ಡಿಎಂಕೆ ಪಕ್ಷ ಒಂದು ವೇಳೆ ಅಧಿಕಾರಕ್ಕೆ ಬಂದಲ್ಲಿ ಮದ್ಯದ ಅಂಗಡಿಗಳಿಗೆ ಬೀಗ ಜಡಿಯುವುದು ಖಚಿತ. ಡಿಎಂಕೆ ಸರಕಾರ ಅಧಿಕಾರಕ್ಕೆ ಬಂದ ಕ್ಷಣವೇ ಮದ್ಯ ಮಾರಾಟಕ್ಕೆ ನಿಷೇಧ ಹೇರುವ ಫೈಲ್‌ಗೆ ಸಹಿ ಹಾಕಲಾಗುವುದು ಎಂದು ಭರವಸೆ ನೀಡಿದರು.
ಮದ್ಯ ಮಾರಾಟದಿಂದ ಹಲವಾರು ಕುಟುಂಬಗಳು ಸರ್ವನಾಶವಾಗುತ್ತಿವೆ. ಆದ್ದರಿಂದ, ರಾಜ್ಯವನ್ನು ಮದ್ಯ ಮುಕ್ತ ರಾಜ್ಯವಾಗಿಸಲಾಗುವುದು ಎಂದು ಹೇಳಿದ್ದಾರೆ. ರಾಜ್ಯ ಸರಕಾರ ರೈತರಿಗೆ ಪ್ರತಿ ಲೀಟರ್‌ಗೆ ಕೇವಲ 22 ರೂಪಾಯಿಗಳನ್ನು ಪಾವತಿಸುತ್ತಿದೆ. ಆದರೆ, 40 ರೂಪಾಯಿಗಳಿಗೆ ಮಾರಾಟ ಮಾಡಿ ರೈತರನ್ನು ವಂಚಿಸುತ್ತಿದೆ ಎಂದು ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಆಪಾದಿಸಿದರು.
Advertisement