ದೇವಸ್ಥಾನದ ಬಳಿ ಗೋಮಾಂಸ: ಅಸ್ಸಾಂ ನಲ್ಲಿ ಕೋಮು ಉದ್ವಿಗ್ನತೆ

ಅಸ್ಸಾಂ ನ ಕಚಾರ್ ಜಿಲ್ಲೆಯ ದೇವಸ್ಥಾನದ ಬಳಿ ಗೋವಿನ ದೇಹದ ಭಾಗಗಳು ಪತ್ತೆಯಾಗಿದ್ದು ಆತಂಕಕಾರಿ ವಾತಾವರಣ ನಿರ್ಮಾಣವಾಗಿದೆ.
ಅಸ್ಸಾಂ
ಅಸ್ಸಾಂ
Updated on: 

ಗುವಾಹಟಿ: ಅಸ್ಸಾಂ ನ ಕಚಾರ್ ಜಿಲ್ಲೆಯ ದೇವಸ್ಥಾನದ ಬಳಿ ಗೋವಿನ ದೇಹದ ಭಾಗಗಳು ಪತ್ತೆಯಾಗಿದ್ದು ಆತಂಕಕಾರಿ ವಾತಾವರಣ ನಿರ್ಮಾಣವಾಗಿದೆ.

ಕೋಮು ಉದ್ವಿಗ್ನತೆ ಉಂಟಾಗಿರುವುದರಿಂದ ಜಿಲ್ಲೆಯಲ್ಲಿ ಕರ್ಫ್ಯೂ ವಿಧಿಸಲಾಗಿದೆ. ದೇವಾಲಯದ ಬಳಿ ಗೋಮಾಂಸ ಹಾಕಿದ್ದಾರೆಂದು ಆರೋಪಿಸಿ ಇಬ್ಬರು ಯುವಕರಿಗೆ ಥಳಿಸಲಾಗಿತ್ತು. ಈ ಘಟನೆಯಲ್ಲಿ ಹಲವು ಜನರಿಗೆ ಗಾಯಗಳುಂಟಾಗಿದ್ದು, ಕೆಲವರನ್ನು ಬಂಧಿಸಲಾಗಿದೆ.

ಉದ್ವಿಗ್ನ ಪರಿಸ್ಥಿತಿ ಉಂಟಾದ ಬೆನ್ನಲ್ಲೇ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೂ ಮುನ್ನ ಯುವಕರಿಗೆ ಥಳಿಸಿದ್ದಕ್ಕೆ ಆಕ್ರೋಶಗೊಂಡ ಗುಂಪೊಂದು ರಸ್ತೆಗಿಳಿದು ಪ್ರತಿಭಟನೆ ನಡೆಸಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈ ವರೆಗೂ ಒಟ್ಟು 19 ಜನರನ್ನು ಬಂಧಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com