
ಮೀನಾ: ಮೆಕ್ಕಾದಲ್ಲಿ ಹಜ್ ಯಾತ್ರೆ ವೇಳೆ ಸಂಭವಿಸಿದ ಕಲ್ತುಳಿತ ದುರಂತದಲ್ಲಿ ಮೃತಪಟ್ಟ ಭಾರತೀಯ ಸಂಖ್ಯೆ 45ಕ್ಕೆ ಏರಿಕೆಯಾಗಿದೆ.
ಅಧಿಕಾರಿಗಳು ಇಂದು ಮತ್ತೆ 10 ಮೃತದೇಗಳ ಗುರುತು ಪತ್ತೆ ಹಚ್ಚಿದ್ದು, ಪಶ್ಚಿಮ ಬಂಗಾಳದ ಮೂವರು, ಜಾರ್ಖಂಡ್ ಮತ್ತು ಕೇರಳದ ತಲಾ ಇಬ್ಬರು ಹಾಗೂ ತಮಿಳುನಾಡು, ಮಹಾರಾಷ್ಟ್ರದ ತಲಾ ಒಬ್ಬರು ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಮಹಾ ದುರಂತದಲ್ಲಿ ಮೃತಪಟ್ಟಿದ್ದಾರೆ.
ನಿನ್ನೆ 13 ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 35ಕ್ಕೆ ಏರಿಯಾಗಿತ್ತು. ಒಟ್ಟಾರೆ ಇದುವರೆಗೆ ಕಾಲ್ತುಳಿತ ಘಟನೆಯಲ್ಲಿ 769 ಮಂದಿ ಮೃತಪಟ್ಟಿದ್ದಾರೆ ಎಂದು ಸೌದಿ ಅಧಿಕಾರಿಗಳು ತಿಳಿಸಿದ್ದಾರೆ.
ಕಾಲ್ತುಳಿತ ಉಂಟಾಗಿದ್ದು ಹೇಗೆ?
ಜಮಾರತ್‍ಗೆ ತೆರಳುವ 5 ಹಾದಿಗಳಲ್ಲಿ 2 ಹಾದಿಗಳನ್ನು ಮುಚ್ಚಲಾಗಿತ್ತು. ದಿಢೀರನೆ ಇಲ್ಲಿ ಯಾತ್ರಿಗಳ ಸಂಖ್ಯೆ ಹೆಚ್ಚಾಗಿ ಕಾಲ್ತುಳಿತ ಉಂಟಾಯಿತು ಎಂದು ಇರಾನ್ ಆರೋಪಿಸಿದೆ. ಆದರೆ, ಬಸ್ ವ್ಯವಸ್ಥೆಯಿದ್ದರೂ ನಡೆದೇ ಸಾಗುತ್ತೇವೆಂದು ಯಾತ್ರಿಗಳು ಪಟ್ಟು ಹಿಡಿದು ನಡೆಯಲು ಆರಂಭಿಸಿದಾಗ ನೂಕುನುಗ್ಗಲು ಸಂಭವಿಸಿತು. ಸರ್ಕಾರದ ಸೂಚನೆ ಪಾಲಿಸದೇ ತಮ್ಮಿಷ್ಟದಂತೆ ಯಾತ್ರಿಗಳು ಚಲಿಸಲು ಶುರು ಮಾಡಿದ್ದೇ ದುರಂತಕ್ಕೆ ಕಾರಣವೆಂದು ಸೌದಿ ಆರೋಗ್ಯ ಸಚಿವ ಹೇಳಿದ್ದಾರೆ.
Advertisement