ಸುಶೀಲ್ ಕುಮಾರ್ ಮೋದಿ ವಿರುದ್ಧ ಬಿಹಾರ ಮತದಾರರಿಗೆ ಆಮಿಷವೊಡ್ಡಿದ ಆರೋಪ

ಬಿಹಾರ ಚುನಾವಣಾ ಪ್ರಚಾರದ ವೇಳೆ ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು ಎಫ್ಐಆರ್ ದಾಖಲಿಸಲಾಗಿದೆ.
ಸುಶೀಲ್ ಕುಮಾರ್ ಮೋದಿ
ಸುಶೀಲ್ ಕುಮಾರ್ ಮೋದಿ
Updated on: 

ಪಾಟ್ನಾ: ಬಿಹಾರ ಚುನಾವಣಾ ಪ್ರಚಾರದ ವೇಳೆ ಮತದಾರರಿಗೆ ಆಮಿಷವೊಡ್ಡಿದ ಆರೋಪದಡಿ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು ಎಫ್ಐಆರ್ ದಾಖಲಿಸಲಾಗಿದೆ.
ಬಿಹಾರದ ಕೈಮರ್ ಜಿಲೆಯಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಭೂಷಣ್ ಪಾಂಡೆ ಪರ ಪ್ರಚಾರ ನಡೆಸಿದ್ದ ಸುಶೀಲ್ ಕುಮಾರ್ ಮೋದಿ, ಮತದಾರರಿಗೆ ಕಲ್ಲರ್ ಟಿವಿ, ಧೋತಿ- ಸೀರೆ, ಲ್ಯಾಪ್ ಟಾಪ್ ಗಳನ್ನು ನೀಡುವುದಾಗಿ ಅಮಿಷವೊಡ್ಡಿದ್ದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಹರ್ ಪ್ರೀತ್ ಕೌರ್ ತಿಳಿಸಿದ್ದಾರೆ.
ಸುಶೀಲ್ ಮೋದಿ ಮತದಾರರಿಗೆ ಆಮಿಷವೊಡ್ಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ ಎಂದು ಸಮಾಜವಾದಿ ಪಕ್ಷ ಹೇಳಿದೆ. ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಸುಶೀಲ್ ಮೋದಿ, ಬಿಹಾರದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಲ್ಯಾಪ್ ಟಾಪ್,  ಧೋತಿ- ಸೀರೆ, ಕಲ್ಲರ್ ಟಿವಿ ನೀಡುವುದಾಗಿ ಹೇಳಿದ್ದೇನೆ ಸರ್ಕಾರದ ಗುರಿಯನ್ನು ತಿಳಿಸಲಾಗಿದೆ. ಮತದಾರರಿಗೆ ಆಮಿಷವೊಡ್ಡಿಲ್ಲ ಎಂದು ಸುಶೀಲ್ ಮೋದಿ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com