
ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೋಯ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಬುಧವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಗುವಾಹಟಿಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ.
2010ರಲ್ಲಿ ಎರಡು ಬೈಪಾಸ್ ಸರ್ಜರಿಗೆ ಒಳಗಾಗಿದ್ದ ಗೊಗೋಯ್ ಅವರು, ನಿನ್ನೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಹಠಾತ್ತನೇ ಕುಸಿದು ಬಿದ್ದಿದ್ದರು.
ಕಾಂಗ್ರೆಸ್ ನಾಯಕ ಗೊಗೋಯ್ ಅವರು ನಿರ್ಜಲೀಕರಣದಿಂದ ಬಳಲುತ್ತಿರುವುದಾಗಿ ಈ ಹಿಂದೆ ವರದಿಯಾಗಿತ್ತು.
ಗೊಗೋಯ್ ಅವರು 2010ರಲ್ಲಿ ಮುಂಬಯಿಯಲ್ಲಿನ ಏಶ್ಯನ್ ಹಾರ್ಟ್ ಇನ್‌ಸ್ಟಿಟ್ಯೂಟ್‌ನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
Advertisement