ಬಿಹಾರ ಚುನಾವಣಾ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 7 ಕೋಟಿ ರೂಪಾಯಿ ವಶಕ್ಕೆ ಪಡೆದ ಪೊಲೀಸರು

ಚುನಾವಣಾ ಕಣವಾಗಿರುವ ಬಿಹಾರದಲ್ಲಿ ಸೆ.30 ರಂದು ದಾಖಲೆ ಇಲ್ಲದೇ ಸಾಗಿಸುತ್ತಿದ್ದ 7 ಕೋಟಿ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ.
7 ಕೋಟಿ ರೂಪಾಯಿ ವಶಕ್ಕೆ(ಸಾಂಕೇತಿಕ ಚಿತ್ರ)
7 ಕೋಟಿ ರೂಪಾಯಿ ವಶಕ್ಕೆ(ಸಾಂಕೇತಿಕ ಚಿತ್ರ)
Updated on: 

ಪಾಟ್ನಾ: ಚುನಾವಣಾ ಕಣವಾಗಿರುವ ಬಿಹಾರದಲ್ಲಿ ಸೆ.30 ರಂದು ದಾಖಲೆ ಇಲ್ಲದೇ ಸಾಗಿಸುತ್ತಿದ್ದ 7 ಕೋಟಿ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ.
ಚಪ್ರಾ ಬಳಿ 7 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದ್ದರೆ, ಸರನ್ ಮತ್ತು ಸಿವಾನ್ ಜಿಲ್ಲೆಗಳಲ್ಲಿ ಈ ವರೆಗೂ 12 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಚುನಾವಣಾ ನಡೆಯುತ್ತಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು ದಾಖಲೆ ಇಲ್ಲದೇ ಸಾಗಿಸುವ ಹಣದ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ.  
ಐದು ಹಂತದ ವಿಧಾನಸಭಾ ಚುನಾವಣೆ ಅ.12 ರಿಂದ ಪ್ರಾರಂಭವಾಗಲಿದ್ದು ನವೆಂಬರ್.8 ಕ್ಕೆ ಫಲಿತಾಂಶ ಬರಲಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com