ಜಮ್ಮು ಸರಣಿ ಸ್ಫೋಟ: ಗುಲಾಮ್ ನಬೀಗೆ ಜೀವಾವಧಿ ಶಿಕ್ಷೆ

ಜಮ್ಮುವಿನ ಮೌಲಾನ ಅಜಾದ್ ಮೆಮೋರಿಯಲ್ ಸ್ಟೇಡಿಯಂನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪಾಕಿಸ್ತಾನ ಮೂಲದ...
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
ನವದೆಹಲಿ: ಜಮ್ಮುವಿನ ಮೌಲಾನ ಅಜಾದ್ ಮೆಮೋರಿಯಲ್ ಸ್ಟೇಡಿಯಂನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪಾಕಿಸ್ತಾನ ಮೂಲದ ಗುಲಾಮ್ ನಬೀಗೆ ಸುಪ್ರೀಂಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.
ಸುಪ್ರೀಂಕೋರ್ಟ್ ನ ನ್ಯಾಯಮೂರ್ತಿಗಳಾದ ಎ.ಕೆ ಸಿಕ್ರಿ ಮತ್ತು ಯು.ಯು ಲಲಿತ್ ಅವರನ್ನೊಳಗೊಂಡ ವಿಭಾಗೀಯ ಪೀಠ ಗುಲಾಮ್ ನಬೀಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. 
1995ರ ಜನವರಿ 26ರಂದು ಮೌಲಾನ ಅಜಾದ್ ಸ್ಟೇಡಿಯಂನಲ್ಲಿ ಮೂರು ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿದ್ದು, 18 ಮಂದಿ ತೀವ್ರ ಗಾಯಗೊಂಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com