ಬಿಹಾರಕ್ಕೆ ಬಿಜೆಪಿ ಪ್ರಣಾಳಿಕೆ: ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ವಿದ್ಯಾರ್ಥಿನಿಯರಿಗೆ ದ್ವಿಚಕ್ರ ವಾಹನದ ಭರವಸೆ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿದರೆ, ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್, ವಿದ್ಯಾರ್ಥಿನಿಯರಿಗೆ ದ್ವಿಚಕ್ರ ವಾಹನ, ದಲಿತರಿಗೆ ಕಲರ್ ಟಿವಿ ನೀಡುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿದೆ.
ಬಿಜೆಪಿ
ಬಿಜೆಪಿ

ಪಾಟ್ನ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಿದರೆ, ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್, ವಿದ್ಯಾರ್ಥಿನಿಯರಿಗೆ ದ್ವಿಚಕ್ರ ವಾಹನ, ದಲಿತರಿಗೆ ಕಲರ್ ಟಿವಿ ನೀಡುವುದಾಗಿ ಪ್ರಣಾಳಿಕೆಯಲ್ಲಿ  ಬಿಜೆಪಿ ತಿಳಿಸಿದೆ.
ಪ್ರಣಾಳಿಕೆಯನ್ನು ಕೇಂದ್ರ ಸಚಿವ ಅರುಣ್ ಜೇಟ್ಲಿ ಬಿಡುಗಡೆ ಮಾಡಿದ್ದು, ವಿಧಾನಸಭಾ ಚುನಾವಣೆಯಲ್ಲಿ ಬಹುಮತ ದೊರೆತರೆ ಧೋತಿ- ಸೀರೆಗಳನ್ನು ನೀಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿದೆ. ಪ್ರಣಾಳಿಕೆ ಬಿಹಾರದ  ಅಭಿವೃದ್ಧಿಗೆ ಬಿಜೆಪಿಯ ವಿಷನ್ ಡಾಕ್ಯುಮೆಂಟ್ ನ ಭಾಗವಾಗಿದೆ ಎಂದು ಜೇಟ್ಲಿ ಹೇಳಿದ್ದಾರೆ.   
ಮಹಿಳೆ ಮತ್ತು ದಲಿತರ ಅಭಿವೃದ್ಧಿಗೆ ಪ್ರಣಾಳಿಕೆಯಲ್ಲಿ ಒತ್ತು ನೀಡಲಾಗಿದೆ ಎಂದು ಬಿಹಾರ ಬಿಜೆಪಿ ಮುಖಂಡ ಭುಪೇಂದ್ರ ಯಾದವ್ ಹೇಳಿದ್ದಾರೆ. ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಬಿಹಾರದ ಅಭಿವೃದ್ಧಿಗೆ ಕಾಲೇಜು- ವಿಶ್ವವಿದ್ಯಾನಿಲಯಗಳಲ್ಲಿ ಉಚಿತ ವೈಫೈ ನೀಡುವುದು ಸೇರಿದಂತೆ ಏಳು ಅಂಶಗಳ ಅಜೆಂಡಾ ಘೋಷಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com