ಅಲಿಗಢ ಮುಸ್ಲಿಂ ವಿವಿ ವಿವಾದ: ಕೇಂದ್ರದಿಂದ ಮೇಲ್ಮನವಿ ವಾಪಸ್

ಅಲಿಗಢ ಮುಸ್ಲಿಮ್ ವಿಶ್ವವಿದ್ಯಾಲಯ ಅಲ್ಪ ಸಂಖ್ಯಾತ ಸಂಸ್ಥೆಯಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ...
ಅಲಿಗಢ ವಿವಿ
ಅಲಿಗಢ ವಿವಿ
Updated on: 
ನವದೆಹಲಿ: ಅಲಿಗಢ ಮುಸ್ಲಿಮ್ ವಿಶ್ವವಿದ್ಯಾಲಯ ಅಲ್ಪ ಸಂಖ್ಯಾತ ಸಂಸ್ಥೆಯಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ತನ್ನ ಮೇಲ್ಮನವಿಯನ್ನು ವಾಪಸ್ ಪಡೆಯುವುದಾಗಿ ಸೋಮವಾರ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ತಿಳಿಸಿದೆ.
ಕೇಂದ್ರ ಸರ್ಕಾರ ಪರವಾಗಿ ಕೋರ್ಟ್ ಗೆ ಮಾಹಿತಿ ನೀಡಿದ ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರು, ಅಲಿಗಢ ಮುಸ್ಲಿಮ್ ವಿಶ್ವವಿದ್ಯಾಲಯ ಸಲ್ಲಿಸಿರುವ ಮೇಲ್ಮನವಿಗೂ ಕೇಂದ್ರದ ಮೇಲ್ಮನವಿಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. ವಿವಿ ಸಹ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ಕೇಂದ್ರ ಸರ್ಕಾರ ತನ್ನ ಮೇಲ್ಮನವಿಯನ್ನು ಹಿಂತೆಗೆದುಕೊಳ್ಳುವ ಸಂಬಂಧ ಅರ್ಜಿ ಸಲ್ಲಿಸಲು 8 ವಾರಗಳ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್, ಇದಕ್ಕೆ ಪ್ರತಿ ಅಫಿಡವಿಟ್ ಸಲ್ಲಿಸಲು ಅಲಿಗಢ ಮುಸ್ಲಿಂ ವಿಶ್ವಿವಿದ್ಯಾಲಯಕ್ಕೂ ಅನುಮತಿ ನೀಡಿದೆ.
ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಅಲಿಗಢ್ ವಿವಿ ಕುಲಪತಿ ಜಮೀರ್ ಉದ್ದೀನ್ ಶಾಹ್ ವಿವಿಗೆ ಅಲ್ಪ ಅಂಖ್ಯಾತ ಸ್ಥಾನಮಾನ ಉಳಿಸಿಕೊಳ್ಳಲು ಬೆಂಬಲ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೇಲ್ಮನವಿಯನ್ನು ಹಿಂಪಡೆಯಲು ನಿರ್ಧರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com