ಬಿಹಾರದಲ್ಲಿ ಮದ್ಯಪಾನ ನಿಷೇಧ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್

ಬಿಹಾರಾದ್ಯಂತ ಮದ್ಯ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿರುವ ಬಿಹಾರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ನಿವೃತ್ತ ಸೈನಿಕರೊಬ್ಬರು ಪಟ್ನಾ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪಾಟ್ನಾ: ಬಿಹಾರಾದ್ಯಂತ ಮದ್ಯ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿರುವ ಬಿಹಾರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ನಿವೃತ್ತ ಸೈನಿಕರೊಬ್ಬರು ಪಟ್ನಾ ಹೈಕೋರ್ಟ್‌ನಲ್ಲಿ ಬುಧವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ನಿವೃತ್ತ ಸೈನಿಕ ಎ.ಎನ್‌.ಸಿಂಗ್‌ ಎಂಬುವರು ಸರ್ಕಾರದ ಪಾನ ನಿಷೇಧ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿರುವುದು ಮಾನವನ ಕುಡಿಯುವ ಮತ್ತು ತಿನ್ನುವ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಏಪ್ರಿಲ್ 1ರಿಂದ ಜಾರಿಯಾಗುವಂತೆ ಬಿಹಾರದ ಗ್ರಾಮೀಣ ಪ್ರದೇಶಗಳಲ್ಲಿ ಪಾನ ನಿಷೇಧವನ್ನು ಜಾರಿಗೆ ತರಲಾಗಿತ್ತು. ನಗರ ಪ್ರದೇಶಗಳಲ್ಲಿ ನಿಷೇಧ ಜಾರಿಗೆ ತರದ ಬಗ್ಗೆ ವ್ಯಾಪಕ ಟೀಕೆ ಮತ್ತು ವಿರೊಧ ವ್ಯಕ್ತವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಸಿದ ಬಿಹಾರ ಸರ್ಕಾರ ರಾಜ್ಯದಾದ್ಯಂತ ಸಂಪೂರ್ಣ ಪಾನ ನಿಷೇಧ ಜಾರಿಗೆ ತಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com