
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ದ ಪುಲ್ವಾಮಾ, ಕುಪ್ವಾರದಲ್ಲಿ ಉಗ್ರರು ನುಸುಳಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಯೋಧರು ಬುಧವಾರ ಕಾರ್ಯಾಚರಣೆಗಿಳಿದಿದ್ದಾರೆ.
ಯೋಧರು ಕಾರ್ಯಾಚರಣೆ ನಡೆಸುತ್ತಿದ್ದಂತೆ ಅಡಗಿ ಕುಳಿತಿರುವ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದು, ಉಗ್ರರ ದಾಳಿಗೆ ಭಾರತೀಯ ಯೋಧರು ದಿಟ್ಟ ಉತ್ತರ ನೀಡುತ್ತಿದ್ದಾರೆ. ಈಗಾಗಲೇ ಮತ್ತಷ್ಟು ಯೋಧರು ಸ್ಥಳಕ್ಕಾಗಮಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ವರೆಗೂ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶೇಕ್ಪುರದ ಲಾಲ್ಪೊರಾ ಪ್ರದೇಶದಲ್ಲಿ ಉಗ್ರರಿರುವ ಖಚಿತ ಮಾಹಿತಿ ಮೇರೆಗೆ ಯೋಧರು ಕಳೆದ ರಾತ್ರಿಯಿಂದ ಕಾರ್ಯಾಚರಣೆಗಿಳಿದಿದ್ದರು. ಇದರಂತೆ ಇಂದು ಬೆಳಿಗ್ಗೆ ಓರ್ವ ಉಗ್ರನ್ನು ಸದೆ ಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ, ಉಗ್ರ ಬಳಿಸಿದ್ದ ಶಸ್ತ್ರಾಸ್ತ್ರಗಳನ್ನು ಯೋಧರು ವಶಕ್ಕೆ ಪಡೆದಿದ್ದಾರೆ. ಮೂಲಗಳ ಪ್ರಕಾರ ಸಾವನ್ನಪ್ಪಿರುವ ಉಗ್ರ ಹಿಜ್ಬುಲ್ ಮುಜಾಹಿದ್ದೀನ್'ಗೆ ಸೇರಿದವನಾಗಿದ್ದಾನೆಂದು ತಿಳಿದುಬಂದಿದೆ.
Advertisement