ಸಾಮಾಜಿಕ ಜಾಲ ತಾಣಗಳಲ್ಲಿ ಸಕ್ರಿಯನಾಗಿದ್ದ ರಾವೂಫ್ ಇಸಿಸ್ ಸಂಘಟನೆಯೊಂದಿಗೆ ಸಂಪರ್ಕ ಸಾಧಿಸಿ, ಸಂಘಟನೆ ಸೇರಿಕೊಳ್ಳುವ ಬಗ್ಗೆ ಮಾತುಕತೆ ನಡೆಸಿದ್ದ ಎನ್ನಲಾಗಿದೆ. ಅಲ್ಲದೆ ಸಿರಿಯಾ ಮತ್ತು ಇರಾಕ್ಗಳಲ್ಲಿ ಸಾಕಷ್ಟು ಚುರುಕಾಗಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪದನೆ ಸಂಘಟನೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿಕೊಂಡಿದ್ದ ಎಂಬುದು ವಿಚಾರಣೆ ವೇಳೆ ಬಹಿರಂಗವಾಗಿದೆ.