
ಮುಜಾಫ್ಫರ್ಪುರ್: ಬಿಹಾರ ರಾಜ್ಯದ ಮುಜಾಫ್ಫರ್ಪುರ್ ನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಕಾರೊಂದು ಮಗುಚಿಬಿದ್ದ ಪರಿಣಾಮ 4 ಸ್ಥಳದಲ್ಲೇ ಸಾವನ್ನಪ್ಪಿ, 4 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.
ಕಾರು ಅಪಘಾತಕ್ಕೀಡಾಗುತ್ತಿದ್ದಂತೆ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Advertisement