ದೆಹಲಿಯಲ್ಲಿ ಪ್ರತಿ ತಿಂಗಳು 15 ದಿನ ಸಮ-ಬೆಸ ನಿಯಮ ಜಾರಿ ಸಾಧ್ಯತೆ: ಕೇಜ್ರಿವಾಲ್

ರಾಷ್ಟ್ರರಾಜಧಾನಿಯಲ್ಲಿ ಪ್ರತಿ ತಿಂಗಳು 15 ದಿನ ಸಮ-ಬೆಸ ಸಾರಿಗೆ ನಿಯಮ ಜಾರಿಗೊಳಿಸುವ ಬಗ್ಗೆ ದೆಹಲಿ ಸರ್ಕಾರ ಗಂಭೀರ ಚಿಂತನೆ ನಡೆಸಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಪ್ರತಿ ತಿಂಗಳು 15 ದಿನ ಸಮ-ಬೆಸ ಸಾರಿಗೆ ನಿಯಮ ಜಾರಿಗೊಳಿಸುವ ಬಗ್ಗೆ ದೆಹಲಿ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
ಈ ಸಂಬಂಧ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಸಿಎಂ, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸಮರ್ಪಕವಾಗುವವರೆಗೆ ತಿಂಗಳಲ್ಲಿ 15ದಿನ ಸಮ-ಬೆಸ ನಿಯಮ ಜಾರಿಗೆ ತರಲಾಗುವುದು ಎಂದರು.
ಏಪ್ರಿಲ್ 15ರಿಂದ ದೆಹಲಿಯಲ್ಲಿ ಮತ್ತೆ ಸಮ-ಬೆಸ ನಿಯಮ ಜಾರಿಗೆ ಬರುತ್ತಿದ್ದು, ಈ ಬಾರಿ ಶಾಲಾ ವಾಹನಗಳಿಗೆ ಹಾಗೂ ಮಹಿಳೆಯರಿಗೆ ವಿನಾಯ್ತಿ ನೀಡಲಾಗಿದೆ.
ಇದೇ ಸುದ್ದಿಗೋಷ್ಠಿಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮೇಲೆ ವ್ಯಕ್ತಿಯೊಬ್ಬ ಏಕಾಏಕಿ ಶೂ ಎಸೆದ ಘಟನೆಯೂ ನಡೆಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com