ಬಂಗಾಳದ 70 ವಿಧಾನಸಭಾ ಕ್ಷೇತ್ರಗಳ ಫಲಿತಾಂಶದ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ!

ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಪೈಕಿ 70 ವಿಧಾನಸಭಾ ಕ್ಷೇತ್ರಗಳ ಫಲಿತಾಂಶದ ಮೇಲೆ ಸಾಮಾಜಿಕ ಜಾಲತಾಣಗಳು ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.
ಬಂಗಾಳದ 70 ವಿಧಾನಸಭಾ ಕ್ಷೇತ್ರಗಳ ಫಲಿತಾಂಶದ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ!
ಬಂಗಾಳದ 70 ವಿಧಾನಸಭಾ ಕ್ಷೇತ್ರಗಳ ಫಲಿತಾಂಶದ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ!
Updated on: 

ಕೋಲ್ಕತಾ: ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಪೈಕಿ 70 ವಿಧಾನಸಭಾ ಕ್ಷೇತ್ರಗಳ ಫಲಿತಾಂಶದ ಮೇಲೆ ಸಾಮಾಜಿಕ ಜಾಲತಾಣಗಳು ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.
ಪಶ್ಚಿಮ ಬಂಗಾಳದಲ್ಲಿ  ಚುನಾವಣೆ ಮೇಲೆ ಸಾಮಾಜಿಕ ಜಾಲತಾಣಗಳ ಪರಿಣಾಮದ ವಿಷಯದ ಬಗ್ಗೆ ಫೇಸ್ ಬುಕ್ ಇಂಡಿಯಾ ಸಹಯೋಗದೊಂದಿಗೆ ಸಮೀಕ್ಷೆ ನಡೆಸಲಾಗಿದೆ. ಸಮೀಕ್ಷೆ ಪ್ರಕಾರ ರಾಜ್ಯದ 70 ಅತಿ ಹೆಚ್ಚು ಪ್ರಭಾವ ಬೀರುವ ವಿಧಾನಸಭಾ ಕ್ಷೇತ್ರಗಳಿದ್ದು, ಈ ಕ್ಷೇತ್ರಗಳ ಚುನಾವಣಾ ಫಲಿತಾಂಶದ ಮೇಲೆ ಸಾಮಾಜಿಕ ಜಾಲತಾಣಗಳ ಬಳಕೆದಾರರು ಪ್ರಭಾವ ಬೀರುವ ಸಾಧ್ಯತೆ ಇದೆ ಎಂಬುದು ತಿಳಿದುಬಂದಿದೆ.
ಇಂಟರ್ ನೆಟ್ ಹಾಗೂ ಮೊಬೈಲ್ ಅಸೋಸಿಯೇಷನ್ ಆಫ್ ಇಂಡಿಯಾ(ಐಎಎಂಎಐ) ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಸಾಮಾಜಿಕ ಜಾಲತಾಣಗಳಿಂದ  ಮಧ್ಯಮ ಪ್ರಭಾವ ಎದುರಿಸುವ 21 ಕ್ಷೆತ್ರಗಳಿದ್ದರೆ, 203 ಅತ್ಯಂತ ಕಡಿಮೆ ಪ್ರಭಾವ ಎದುರಿಸುವ ಕ್ಷೇತ್ರಗಳಿವೆ ಎಂದು ತಿಳಿದುಬಂದಿದೆ.
ವರದಿ ಪ್ರಕಾರ, ಸಾಮಾಜಿಕ ಜಾಲತಾಣಗಳು ಪ್ರತಿ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದ ಮೇಲೆ ಅತಿ ಹೆಚ್ಚು ಪ್ರಭಾವ ಬೀರಲಿದೆ ಎಂದು ಹೇಳಲಾಗಿದೆ. ಸಾಮಾಜಿಕ ಜಾಲತಾಣಗಳ 250 ಬಳಕೆದಾರರಿಂದ ಸ್ಯಾಂಪಲ್ ಗಳನ್ನು ಕಲೆಹಾಕಲಾಗಿದ್ದು, ಸಾಮಾಜಿಕ ಜಲಾತಾಣದ ಪ್ರಭಾವ ಚುನಾವಣೆಗೆ ಸಂಬಂಧಿಸಿದಂತೆ ಟಿವಿ ಹಾಗೂ ಮುದ್ರಣ ಮಾಧ್ಯಮವನ್ನೇ ಅಧಿಕೃತ ಸುದ್ದಿ ಮೂಲ ಎಂದು ಪರಿಗಣಿಸಿದ್ದಾರಂತೆ. ಇದರ ಹೊರತಾಗಿ ಶೇ.41 ರಷ್ಟು ಜನರು ಚುನಾವಣಾ ಸುದ್ದಿಗಾಗಿ ಸಾಮಾಜಿಕ ಮಾಧ್ಯಮಗಳನ್ನು ಅವಲಂಬಿಸಿದ್ದಾರೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com