ಸಾಂದರ್ಭಿಕ ಚಿತ್ರ
ದೇಶ
ಟಿಎಂಸಿ ಕಾರ್ಯಕರ್ತನ ಬರ್ಬರ ಕೊಲೆ: 12 ಆರೋಪಿಗಳ ಬಂಧನ
ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಪೊಲೀಸರು...
ಮಿಡ್ನಾಪುರ್: ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮ ಮಿಡ್ನಾಪುರ್ ನಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತ ಜಾಯದೆಬ್ ಜನ(30) ನನ್ನು ಕಿಡಿಗೇಡಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು. ಹತ್ಯೆ ಮಾಡಿದವರು ಕಾಂಗ್ರೆಸ್ ಮತ್ತು ಸಿಪಿಐ(ಎಂ)ಗೆ ಸೇರಿದವರು ಎಂದು ಹೇಳಲಾಗುತ್ತಿದೆ.
ಮೃತನ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಚಿವ ಸೇರಿದಂತೆ 22 ಮಂದಿ ವಿರುದ್ಧ ಸಬಾಂಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು, 12 ಆರೋಪಿಗಳನ್ನು ಬಂಧಿಸಿದ್ದು, ಎಫ್ ಐಆರ್ ದಾಖಲಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ