ಎನ್ ಐಟಿ ಸ್ಥಳಾಂತರ ಬೇಡಿಕೆಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ

ಶ್ರೀನಗರದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯನ್ನು(ಎನ್ ಐಟಿ)ಯನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಬೇಕು ಎಂದು ಕೆಲವು...
ಎನ್ ಐಟಿ
ಎನ್ ಐಟಿ
ಶ್ರೀನಗರ: ಶ್ರೀನಗರದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯನ್ನು(ಎನ್ ಐಟಿ)ಯನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಬೇಕು ಎಂದು ಕೆಲವು ವಿದ್ಯಾರ್ಥಿಗಳು ಇಟ್ಟಿದ್ದ ಬೇಡಿಕೆಯನ್ನು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ(ಎಚ್ ಆರ್ ಡಿ) ಸಚಿವಾಲಯ ತಿರಸ್ಕರಿದೆ.
ವಿದ್ಯಾರ್ಥಿಗಳ ನಡುವಿನ ಘರ್ಷಣೆಯಿಂದ ವಿವಾದಕ್ಕೆ ಗುರಿಯಾಗಿರುವ ಶ್ರೀನಗರದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯನ್ನು ಸ್ಥಳಾಂತರಿಸಬೇಕು ಎಂದು ಒತ್ತಡ ಹೇರಲಾಗಿತ್ತು. 
ಇತ್ತೀಚೆಗೆ ಎನ್ ಐಟಿನಲ್ಲಿರುವ ಸ್ಥಳೀಯ (ಕಾಶ್ಮೀರಿ) ವಿದ್ಯಾರ್ಥಿಗಲು ಮತ್ತು ಹೊರ ರಾಜ್ಯದ ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ ನಡೆದಿತ್ತು. ಈ ಹಿನ್ನಲೆಯಲ್ಲಿ ಕ್ಯಾಂಪಸ್ ಅನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಹೊರ ರಾಜ್ಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
ಆದರೆ, ಹೊರ ರಾಜ್ಯದ ಬೇಡಿಕೆಯನ್ನು ತಿರಸ್ಕರಿಸಿರುವ ಕೇಂದ್ರ ಸರ್ಕಾರ, ಎನ್ ಐಟಿ ಬೇರೆ ರಾಜ್ಯಕ್ಕೆ ಸ್ಥಳಾಂತರಿಸುವುದಿಲ್ಲ. ಇದನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ. 
ಎನ್ ಐಟಿ ಅನ್ನು ಬೇರೆ ರಾಜ್ಯಕ್ಕೆ ಸ್ಥಳಾಂತರಿಸುವುದನ್ನು ಹೊರತು ಪಡಿಸಿ, ಇತರೆ ಬೇಡಿಕೆಗಳನ್ನು ಈಡೇರಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿದೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಜೊತೆ ಮಾತುಕತೆಗೆ ಕೇಂದ್ರ ಸರ್ಕಾರ ಮೂವರ ಸದಸ್ಯರ ತಂಡವನ್ನು ಕಳುಹಿಸಿತ್ತು. ಹೊರ ರಾಜ್ಯದ ವಿದ್ಯಾರ್ಥಿಗಳ ಪ್ರತಿನಿಧಿಗಳೊಂದಿಗೆ ಕೇಂದ್ರ ಸರ್ಕಾರದ ನಿಯೋಗ, ಉಪ ಮುಖ್ಯಮಂತ್ರಿ ನಿರ್ಮಲ್ ಸಿಂಗ್ ಹಾಗೂ ಶಿಕ್ಷಣ ಸಚಿವ ನಯೀಮ್ ಅಖ್ತರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com