
ತಿರುವನಂತಪುರ: ಕೇರಳದ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಭಾನುವಾರ ಕೇರಳ ರಾಜ್ಯಕ್ಕೆ ಭೇಟಿ ನೀಡಿದ್ದು, ಮೃತರ ಕುಟುಂಬ ಕುರಿತು ಸಂತಾಪ ಸೂಚಿಸಿದ್ದಾರೆ.
ಆಸ್ಪತ್ರೆಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಾಕಷ್ಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವೈದ್ಯಕೀಯ ಕಾಲೇಜು ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳೊಂದಿಗೆ ಹಾಗೂ ವೈದ್ಯರೊಂದಿಗೆ ಮಾತುಕತೆ ನಡೆಸಿದ್ದೇನೆಂದು ಹೇಳಿದ್ದಾರೆ.
ಅಲ್ಲದೆ, ಮೃತರ ಕುಟುಂಬದ ಕುರಿತಂತೆ ಸಂತಾಪ ಸೂಚಿಸಿರುವ ಅವರು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ಕೊಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕೇಂದ್ರ ಸರ್ಕಾರ ಈಗಾಗಲೇ ಗಾಯಾಳುಗಳಿಗೆ ರು.50 ಸಾವಿರ ಹಾಗೂ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದೆ ಎಂದು ಹೇಳಿದ್ದಾರೆ.
Advertisement