ಕೊಲ್ಲಂ ಅಗ್ನಿ ದುರಂತ ಸುದ್ದಿ ಕೇಳಿ ಆಘಾತವಾಯಿತು: ಸಚಿನ್

ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಕೇರಳದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮಡಿದವರಿಗೆ ಸಂತಾಪ...
ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್
ಮುಂಬೈ: ಭಾರತದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಕೇರಳದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮಡಿದವರಿಗೆ ಸಂತಾಪ ಸೂಚಿಸಿದ್ದಾರೆ. 
ಕೇರಳದ ಕೊಲ್ಲಂ ಜಿಲ್ಲೆಯ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ಅನಾಹುತದ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ದುರಂತದಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ. 
ಕೊಲ್ಲಂ ನಲ್ಲಿ ಅಗ್ನಿ ಅನಾಹುತವಾಗಿ 102ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂಬ ಸುದ್ದಿ ಕೇಳಿ ಆಘಾತವಾಯಿತು. ಘಟನೆಯಲ್ಲಿ ಮಡಿದವರ ಕುಟಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಸಚಿನ್ ಪ್ರಾರ್ಥಿಸಿದ್ದಾರೆ. 
ಕೊಲ್ಲಂ ಜಿಲ್ಲೆಯಲ್ಲಿನ ಪಾರವೂರ್ ನಲ್ಲಿರುವ ಮೂಕಾಂಬಿಕ ದೇಗುಲದಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ನಡೆಸಲಾಗುತ್ತಿತ್ತು. ಈ ವೇಳೆ ಅಗ್ನಿ ಅನಾಹುತ ಸಂಭವಿಸಿದ್ದು, ದುರ್ಘಟನೆಯಲ್ಲಿ 100 ಮಂದಿ ಸಾವನ್ನಪ್ಪಿ 350 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com