ನವದೆಹಲಿ: ಕೇರಳದ ಕೊಲ್ಲಂ ಜಿಲ್ಲೆಯ ಮೂಕಾಂಬಿಕ ದೇಗುಲದಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ 100 ಮಂದಿಯ ದುರಂತ ಸಾವಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಂತಾಪ ಸೂಚಿಸಿದ್ದಾರೆ.
ಘಟನೆಯಲ್ಲಿ ಮಡಿದವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹೇಳಿದ ಅವರು, ಸರ್ಕಾರ ಕೂಡಲೇ ಪರಿಹಾರವನ್ನು ಬಿಡುಗಡೆಗೊಳಿಸಬೇಕು ಎಂದು ಆದೇಶಿಸಿದ್ದಾರೆ.
ಕೊಲ್ಲಂ ಜಿಲ್ಲೆಯಲ್ಲಿನ ಪಾರವೂರ್ ನಲ್ಲಿರುವ ಮೂಕಾಂಬಿಕ ದೇಗುಲದಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ನಡೆಸಲಾಗುತ್ತಿತ್ತು. ಈ ವೇಳೆ ಅಗ್ನಿ ಅನಾಹುತ ಸಂಭವಿಸಿದ್ದು, ದುರ್ಘಟನೆಯಲ್ಲಿ 100 ಮಂದಿ ಸಾವನ್ನಪ್ಪಿ 350 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿತ್ತು.