ಪೊಲೀಸ್ ಫೈರಿಂಗ್ ನಿಂದ ಹೈವೊಲ್ಟೇಜ್ ತಂತಿ ತುಂಡಾಗಿ 11 ಸಾವು

ಪೊಲೀಸ್ ಫೈರಿಂಗ್ ವೇಳೆ ಹೈವೊಲ್ಟೇಜ್ ತಂತಿ ತುಂಡಾದ ಪರಿಣಾಮ ವಿದ್ಯುತ್ ತಗುಲಿ 11 ಮಂದಿ ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಮಂದಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ತಿನ್ಸುಕಿಯಾ: ಪೊಲೀಸ್ ಫೈರಿಂಗ್ ವೇಳೆ ಹೈವೊಲ್ಟೇಜ್ ತಂತಿ ತುಂಡಾದ ಪರಿಣಾಮ ವಿದ್ಯುತ್ ತಗುಲಿ 11 ಮಂದಿ ಮೃತಪಟ್ಟಿದ್ದಾರೆ ಮತ್ತು 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ದಾರುಣ ಘಟನೆ ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯ ಪಂಗಿರಿಯಲ್ಲಿ ಸೋಮವಾರ ನಡೆದಿದೆ.
ಮೂರು ದಿನಗಳ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗಳನ್ನು ತಮಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಜನರನ್ನು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಈ ವೇಳೆ ಪೊಲೀಸರ ಗುಂಡು ಹೈವೊಲ್ಟೇಜ್ ತಂತಿಗೆ ತಗುಲಿ ತುಂಡಾಗಿ ಪ್ರತಿಭಟನಾಕಾರರ ಮೇಲೆ ಬಿದ್ದಿದೆ. 
ಪ್ರತಿಭಟನಾಕಾರರು ಪೊಲೀಸರ ಮೇಲೆ ಹಾಗೂ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದ್ದರಿಂದ, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ತಿನ್ಸುಕಿಯಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಅರೆಸೇನಾಪಡೆ ಸಿಬ್ಬಂದಿ ದಾವಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com