ಗುವಾಹಟಿ/ಕೊಲ್ಕತ್ತಾ: ಅಸ್ಸಾಂನಲ್ಲಿ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ಹಾಗೂ ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ 2 ನೇ ಭಾಗದ ಮತದಾನ ಪ್ರಕ್ರಿಯೆ ಸೋಮವಾರ ಆರಂಭವಾಗಿದೆ.
ಅಂತಿಮ ಹಂತದಲ್ಲಿ ಅಸ್ಸಾಂನ 61 ವಿಧಾನಸಭಾ ಕ್ಷೇತ್ರಗಳಿಗಾಗಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ 31 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಪಶ್ಚಿಮ ಮೇದಿನಿಪುರ್, ಬಂಕುರಾ ಮತ್ತು ಬುರ್ದ್ವಾನ್ ಜಿಲ್ಲೆಗಳಲ್ಲಿರುವ 31 ವಿಧಾನಸಭಾ ಕ್ಷೇತ್ರಗಳಿಗೆ ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯುತ್ತಿದೆ.
ಮತದಾನದ ವೇಳೆ ಶಾಂತಿ ಸಮಾಧಾನ ಕಾಪಾಡುವುದಕ್ಕಾಗಿ ಸಶಸ್ತ್ರ ಪಡೆ ಮತ್ತು ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ.
126 ಸದಸ್ಯರಿರುವ ಅಸ್ಸಾಂ ವಿಧಾನಸಭೆಯಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳದ 249 ವಿಧಾನಸಭಾ ಕ್ಷೇತ್ರಗಳಿಗೆ 6 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಚುನಾವಣಾ ಆಯೋಗ ಮತದಾನ ಕೇಂದ್ರಗಳಲ್ಲ್ಲಿ 916 ಮೈಕ್ರೋ ಅಬ್ಸರ್ವರ್ಸ್ ಗಳನ್ನು ಅಳವಡಿಸಿದ್ದು, 505 ಮತದಾನ ಕೇಂದ್ರಗಳಲ್ಲಿ ವೆಬ್ ಕಾಸ್ಟಿಂಗ್ ಸಿಸ್ಟಂ ಅಳವಡಿಸಲಾಗಿದೆ.