ತರುಣ್ ಗೊಗೊಯ್
ತರುಣ್ ಗೊಗೊಯ್

ಅಸ್ಸಾಂ ಸಿಎಂ ತರುಣ್ ಗೊಗೊಯ್ ವಿರುದ್ಧ ಎಫ್ಐಆರ್ ದಾಖಲು

ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರ...
ಗುವಾಹಟಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್ ಅವರ ವಿರುದ್ಧ ಸೋಮವಾರ ಎಫ್ಐಆರ್ ದಾಖಲಿಸಲಾಗಿದೆ.
ಅಸ್ಸಾಂ ವಿಧಾನಸಭೆಗೆ ಇಂದು ಎರಡನೇ ಹಾಗೂ ಕೊನೆಯ ಹಂತದ ಮತದಾನ ನಡೆಯಿತು. ಮತದಾನದ ದಿನವೇ ನೀತಿ ಸಂಹಿತೆ ಉಲ್ಲಂಘಿಸಿ ಸುದ್ದಿಗೋಷ್ಠಿ ನಡೆಸಿದ ಆರೋಪದ ಮೇಲೆ ಗೊಗೊಯ್ ಅವರ ವಿರುದ್ಧ ಪೊಲೀಸ್ ಕೇಸ್ ದಾಖಲಿಸಲಾಗಿದೆ. 
ಚುನಾವಣಾ ಆಯೋಗದ ಆದೇಶದ ಹಿನ್ನೆಲೆಯಲ್ಲಿ ಅಸ್ಸಾಂ ಸಿಎಂ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಖಚಿತಪಡಿಸಿರುವುದಾಗಿ ಉಪ ಚುನಾವಣಾ ಆಯುಕ್ತ ಸಂದೀಪ್ ಸೆಕ್ಸೆನಾ ಅವರು ತಿಳಿಸಿದ್ದಾರೆ.
ಇದಕ್ಕು ಮುನ್ನ ಚುನಾವಣಾ ಅಧಿಕಾರಿಗಳ ವಿರುದ್ಧವೇ ವಾಗ್ದಾಳಿ ನಡೆಸಿದ್ದ 81 ವರ್ಷದ ತರುಣ್ ಗೊಗೊಯ್, ಆಯೋಗ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದ್ದರು.

Related Stories

No stories found.

Advertisement

X
Kannada Prabha
www.kannadaprabha.com