

ನವದೆಹಲಿ: ರಾಜಧಾನಿಯ ರಾಜೇಂದರ್ ಮೆಟ್ರೋ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೌಕರನೊಬ್ಬನಿಗೆ ಅನಾಮಧೇಯ ವ್ಯಕ್ತಿಯೊಬ್ಬ ಚೂರಿದು, ರು. 12 ಲಕ್ಷ ದರೋಡೆ ಮಾಡಿರುವ ಘಟನೆಯೊಂದು ಸೋಮವಾರ ನಡೆದಿದೆ.
ಇಂದು ಬೆಳಿಗ್ಗೆ 5.30ರ ಸುಮಾರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಮೆಟ್ರೋ ನಿಲ್ದಾಣದ ಟಿಕೆಟ್ ನೀಡುವ ಕೇಂದ್ರದ ಬಳಿ ಬಂದಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ನೌಕರಿಗೆ ಕೈಯಲ್ಲಿದ್ದ ಚಾಕುವಿನಿಂದ ಇರಿದು ರು.12 ಲಕ್ಷವನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆಂದು ತಿಳಿದುಬಂದಿದೆ.
ಚೂರಿ ಇರಿತಕ್ಕೊಳಗಾದ ನೌಕರನ ನರಳಾಟದ ಶಬ್ಧ ಕೇಳಿದ ಅಲ್ಲಿನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ಥಳದಲ್ಲಿರಿಸಲಾಗಿದ್ದ ಸಿಸಿಟಿವಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.