ವೈದ್ಯಕೀಯ ಕೋರ್ಸ್: ಮತ್ತೆ ಪರೀಕ್ಷೆಗೆ ಅವಕಾಶ ನೀಡಿದ ಸುಪ್ರೀಂ ಕೋರ್ಟ್

ದೇಶಾದ್ಯಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ಎನ್ ಐಐಟಿ)ಯನ್ನು ಜಾರಿಗೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶಾದ್ಯಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ಎನ್ ಐಐಟಿ)ಯನ್ನು ಜಾರಿಗೆ ತರಲು ಸುಪ್ರೀಂ ಕೋರ್ಟ್ ಹಾದಿ ಸುಗಮಗೊಳಿಸಿದೆ.

ಸುಪ್ರೀಂ ಕೋರ್ಟ್ 2013ರಲ್ಲಿ ನೀಡಿದ ಆದೇಶವನ್ನು ಬದಿಗಿರಿಸಿ ಇದೀಗ ಮತ್ತೆ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಈ ಸಂಬಂಧ ಪುನರ್ ಪರಿಶೀಲನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಸಾಮಾನ್ಯ ಪ್ರವೇಶ ಪರೀಕ್ಷೆಯ ಸಿಂಧುವೇ ಅಥವಾ ಅಸಿಂಧುವೇ ಎಂಬ ಕುರಿತು ಹೊಸ ವಾದವನ್ನು ಆಲಿಸಲಿದೆ. ಈ ಸಂಬಂಧ ತೀರ್ಪು ನೀಡುವವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಬಹುದೆಂದು ಸುಪ್ರೀಂ ಕೋರ್ಟ್ ಹೇಳಿದೆ.

ಎಂಬಿಬಿಎಸ್, ಬಿಡಿಎಸ್ ಮತ್ತು ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ಮಾಡುವ ಭಾರತೀಯ ವೈದ್ಯಕೀಯ ಮಂಡಳಿಯ ಅಧಿಸೂಚನೆ ನ್ಯಾಯಸಮ್ಮತವಲ್ಲ ಎಂದು 2013 ಜೂನ್ ನಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.
 
ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಸಿಇಟಿ ನಡೆಸುವಂತೆ ಬಲವಂತ ಮಾಡುವ ಅಧಿಕಾರ ಭಾರತೀಯ ವೈದ್ಯಕೀಯ ಮಂಡಳಿಗೆ ಇಲ್ಲ. ಮತ್ತು ಈ ನಿಯಮದಿಂದ ಅಲ್ಪಸಂಖ್ಯಾತ ಸಮುದಾಯಗಳು ತಮ್ಮದೇ ಆದ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿ, ನಿರ್ವಹಿಸಲು ಸಾಂವಿಧಾನಿಕ ಭರವಸೆಗಳನ್ನು ಉಲ್ಲಂಘಿಸುತ್ತದೆ. ಆದರೆ ಈ ತೀರ್ಪನ್ನು ವಿರೋಧಿಸಿದ ಕೋರ್ಟ್ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿದೆ.

ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಮತ್ತು ಪ್ರಯಾಣ ವೆಚ್ಚಕ್ಕೆ ಭಾರೀ ಹಣ ತೆರಬೇಕಾಗಿ ಬರುವುದಲ್ಲದೆ, ಅನೇಕರು ಲಂಚ ನೀಡಿ ವಿವಿಧ ಕಾಲೇಜಿಗಳಲ್ಲಿ ಸೀಟು ಗಿಟ್ಟಿಸಿಕೊಳ್ಳುವ ಸಂದರ್ಭ ಕಂಡುಬರುತ್ತದೆ. ದೇಶಾದ್ಯಂತ ಈ ವರ್ಷ ಸುಮಾರು 90 ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com