ಪಶ್ಚಿಮ ಬಂಗಾಳ ಚುನಾವಣೆ: ಸಿಪಿಐ(ಎಂ), ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ- 5 ಗಾಯ

ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ), ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಆರಂಭವಾಗಿದ್ದು, ಘರ್ಷಣೆ ವೇಳೆ 5 ಮಂದಿ...
ಪಶ್ಚಿಮ ಬಂಗಾಳ ಚುನಾವಣೆ: ಸಿಪಿಐ(ಎಂ), ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ- 5 ಗಾಯ
ಪಶ್ಚಿಮ ಬಂಗಾಳ ಚುನಾವಣೆ: ಸಿಪಿಐ(ಎಂ), ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ- 5 ಗಾಯ

ಜಮುರಿಯ: ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ), ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ಆರಂಭವಾಗಿದ್ದು, ಘರ್ಷಣೆ ವೇಳೆ 5 ಮಂದಿ ಗಾಯಗೊಂಡಿರುವ ಘಟನೆ ಬರ್ಧಮಾನ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಸಿಪಿಐ(ಎಂ), ಟಿಎಂಸಿ ಕಾರ್ಯಕರ್ತರ ನಡುವೆ ಜಟಾಪಟಿ ಆರಂಭವಾಗಿದೆ. ಈ ವೇಳೆ 5 ಮಂದಿ ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನೆ ಕುರಿತಂತೆ ಮಾತನಾಡಿರುವ ಹಲ್ಲೆಗೊಳಗಾದ ಸಿಪಿಐ(ಎಂ) ಕಾರ್ಯಕರ್ತ, ಟಿಎಂಸಿ ಪಕ್ಷದ 3-4 ಕಾರ್ಯಕರ್ತರು ನಮ್ಮನ್ನು ಲಾಠಿಯಿಂದ ಇದ್ದಕ್ಕಿದ್ದಂತೆ ಹೊಡೆಯಲು ಆರಂಭಿಸಿದ್ದರು. ಆದರೆ, ಸ್ಥಳದಲ್ಲಿ ಪೊಲೀಸರಿದ್ದರೂ ಕೂಡ ರಕ್ಷಣೆಗೆ ಬರಲಿಲ್ಲ ಎಂದು ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದ 31 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಪಶ್ಚಿಮ ಮೇದಿನಿಪುರ್, ಬಂಕುರಾ ಮತ್ತು ಬುರ್ದ್ವಾನ್ ಜಿಲ್ಲೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com