

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ ಟೀಕೆ ಮಾಡಿದ್ದಾರೆ.
ಮುಂಬೈ ನ ಡೆಯೋನರ್ ತ್ಯಾಜ್ಯವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪತ್ರಕರ್ತರೊಂದಿಗೆ ಮಾತನಾಡಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನ ಕೇವಲ ಘೋಷಣೆಯಿಂದ ಯಶಸ್ವಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಡೆಯೋನರ್ ತ್ಯಾಜ್ಯ ವಿಲೇವಾರಿ ಘಟಕ ಇರುವ ಚೆಂಬೂರ್ ನಲ್ಲಿ ಕೆಲವು ಜನರನ್ನು ಭೇಟಿ ಮಾಡಿದೆ. ಅಲ್ಲಿನ ಜನರು ಕ್ಷಯ ರೋಗದಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಯಿಂದಾಗಿ ಒಂದು ಮಗುವೂ ಮೃತಪಟ್ಟಿದೆ. ತ್ಯಾಜ್ಯ ವಿಲೇವಾರಿ ಘಟಕದಿಂದಾಗಿ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಕೇವಲ ಸ್ವಚ್ಛ ಭಾರತ ಅಭಿಯಾನದ ಘೋಷಣೆಯಿಂದಾಗಿ ಏನೂ ಬದಲಾವಣೆಯಾಗುವುದಿಲ್ಲ, ಸ್ವಚ್ಛ ಭಾರತ್ ಅಭೀಯಾನ ಯಶಸ್ವಿಯಾಗುವುದಕ್ಕೆ ಕಾರ್ಯಸೂಚಿಯ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.