ಅಲಹಾಬಾದ್: ವಾರಣಾಸಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧನವಾಗಿ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ಅಜಯ್ ರೈಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ.
ನ್ಯಾಯಾಮೂರ್ತಿ ರಾಜೇಶ್ ದಯಾಳ್ ಕೇಹ್ರೆ ಅವರು ಅಜಯ್ ರೈ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಯಾವುದೇ ಸಾಕ್ಷಿಗಳನ್ನು ನಾಶಪಡಿಸಿದಂತೆ ತಿಳಿಸಿದ್ದು, ಷರತ್ತುಗಳನ್ನು ಉಲ್ಲಂಘಿಸಿದರೆ ಜಾಮೀನು ರದ್ದಾಗುವುದು ಎಂದು ನ್ಯಾಯಾಲಯ ಎಚ್ಚರಿಸಿದೆ.
ಅಕ್ಟೋಬರ್ 7ರಂದು ಹಿಂದೂ ಧಾರ್ಮಿಕ ಮುಖಂಡರ ಮೇಲೆ ಲಾಠಿ ಚಾರ್ಜ್ ಮಾಡಿದ ಪೊಲೀಸರ ವಿರುದ್ಧ ಅಜಯ್ ರೈ ಸೇರಿದಂತೆ ಹಲವರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಅಜಯ್ ರೈ ಅವರನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದರು.