ಕೊಲ್ಲಂ ದೇಗುಲ ಅಗ್ನಿ ದುರಂತವನ್ನು ರಾಷ್ಟ್ರೀಯ ದುರಂತವೆಂದು ಘೋಷಿಸಿ: ಕೇಂದ್ರಕ್ಕೆ ಕೇರಳದ ಮನವಿ

ಕೊಲ್ಲಂ ನ ಮೂಕಾಂಬಿಕ ದೇವಾಲಯದಲ್ಲಿ ನಡೆದ ಅಗ್ನಿ ದುರಂತವನ್ನು ರಾಷ್ಟ್ರೀಯ ದುರಂತವೆಂದು ಘೋಷಿಸಬೇಕೆಂದು ಕೇರಳ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಕೇರಳ ಸಿಎಂ ಉಮ್ಮನ್ ಚಾಂಡಿ
ಕೇರಳ ಸಿಎಂ ಉಮ್ಮನ್ ಚಾಂಡಿ

ತಿರುವನಂತಪುರಮ್: ಕೊಲ್ಲಂ ನ ಮೂಕಾಂಬಿಕ ದೇವಾಲಯದಲ್ಲಿ ನಡೆದ ಅಗ್ನಿ ದುರಂತವನ್ನು ರಾಷ್ಟ್ರೀಯ ದುರಂತವೆಂದು ಘೋಷಿಸಬೇಕೆಂದು ಕೇರಳ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
ಅಗ್ನಿ ದುರಂತದ ಬಗ್ಗೆ ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಮಾಧಮಗಳೊಂದಿಗೆ ಮಾತನಾಡಿರುವ ಕೇರಳ ಸಿಎಂ ಉಮ್ಮನ್ ಚಾಂಡಿ, ಅಗ್ನಿ ದುರಂತವನ್ನು ರಾಷ್ಟ್ರೀಯ ದುರಂತವೆಂದು ಘೋಷಿಸಲು ಕೇಂದ್ರ ಸರ್ಕಾರ ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹೇಳಿದ್ದಾರೆ.
ದೇವಾಲಯದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಟಾಕಿ ಸಿಡಿಸುವಾಗ ಅಗ್ನಿ ದುರಂತ ಉಂಟಾದ ಹಿನ್ನೆಲೆಯಲ್ಲಿ ಪಟಾಕಿಗಳಿಗೆ ನಿರ್ಬಂಧ ವಿಧಿಸುವುದಕ್ಕೆ ಸಂಬಂಧಿಸಿದಂತೆ ನೀತಿಯನ್ನು ಜಾರಿಗೆ ತರುವುದರ ಬಗ್ಗೆ ಏ.14 ರಂದು ಸರ್ವಪಕ್ಷ ಸಭೆಯಲ್ಲಿ ಚರ್ಚಿಸುವುದಾಗಿ ಸಿಎಂ ಉಮ್ಮನ್ ಚಾಂಡಿ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com