ದೇಶ

ಲೈಂಗಿಕ ಕಿರುಕುಳ ನೀಡಿದ್ದು ಯೋಧರಲ್ಲ, ಸ್ಥಳೀಯ ಯುವಕರು: ಯುವತಿ

ಯೋಧರು ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಸ್ಥಳೀಯರು...

ಲೈಂಗಿಕ ಕಿರುಕುಳ ನೀಡಿದ್ದು ಯೋಧರಲ್ಲ, ಸ್ಥಳೀಯ ಯುವಕರು: ಯುವತಿ
ಯುವತಿ
Published On :
ಶ್ರೀನಗರ: ಯೋಧರು ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಸ್ಥಳೀಯರು ಬುಧವಾರ ನಡೆಸಿದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ, ಮೂವರು ಯುಕರು  ಸಾವನ್ನಪ್ಪಿದ್ದಾರೆ. ಶ್ರೀನಗರ, ಕುಪ್ವಾರ ಜಿಲ್ಲೆಯ ವಿವಿಧೆಡೆ ಕರ್ಫ್ಯೂ ವಿಧಿಸಲಾಗಿದೆ. ಆದರೆ ಯುವತಿ ಮಾತ್ರ ತನಗೆ ಲೈಂಗಿಕ ಕಿರುಕುಳ ನೀಡಿದ್ದು ಯೋಧರಲ್ಲ. ಸ್ಥಳೀಯ ಯುವಕರು ಎಂದು ಹೇಳಿದ್ದಾರೆ.
ನನಗೆ ಯಾವೊಬ್ಬ ಸೈನಿಕನೂ ಲೈಂಗಿಕ ಕಿರುಕುಳ ನೀಡಿಲ್ಲ. ಸ್ಥಳೀಯ ಯುವಕರು ತನ್ನ ಮೇಲೆ ದೌರ್ಜನ್ಯ ಎಸಗಿದ್ದಾರೆ ಮತ್ತು ಅವರನ್ನು ಪತ್ತೆ ಹಚ್ಚುವುದಾಗಿ ದೌರ್ಜನ್ಯಕ್ಕೆ ಒಳಗಾದ ಯುವತಿ ಹೇಳಿರುವ ವಿಡಿಯೋವನ್ನು ಸೇನೆ ಬಿಡುಗಡೆ ಮಾಡಿದೆ.
ಯುವತಿ ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ್ದ ವೇಳೆ ಯೋಧ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಸ್ಥಳೀಯರು ಇಂದು ಪ್ರತಿಭಟನೆ ನಡೆಸಿದರು. ಈ ವೇಳೆ ದೇಶ ವಿರೋಧಿ, ಪರ ಸ್ವಾತಂತ್ರ್ಯ ಘೋಷಣೆಗಳನ್ನು ಕೂಗಿದ್ದಾರೆ. ಅಲ್ಲದೇ, ಮಿಲಿಟರಿ ಬಂಕರ್ ಗಳಿಗೆ ಕಲ್ಲಿನಿಂದ ದಾಳಿ ನಡೆಸಿ ನಂತರ ಬೆಂಕಿ ಹಚ್ಚಿದ್ದಾರೆ. 
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದಾರೆ. ಈ ವೇಳೆ ಮೂವರು ಯುವಕರು ಮೃತಪಟ್ಟಿದ್ದು, ಮಹಿಳೆ ಸೇರಿ ಮೂವರು ನಾಗರಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.