ಪಾಕ್ ಉನ್ನತ ಅಧಿಕಾರಿಗಳೊಂದಿಗೆ ಕಿರ್ಪಾಲ್ ಸಿಂಗ್ ಪ್ರಕರಣವನ್ನು ಪ್ರಸ್ತಾಪಿಸಲಿರುವ ಭಾರತ

ಪಾಕಿಸ್ತಾನದ ಜೈಲಿನಲ್ಲಿ ಸಾವನ್ನಪ್ಪಿದ ಭಾರತೀಯ ಕಿರ್ಪಾಲ್ ಸಿಂಗ್ ನ ಪಾರ್ಥಿವ ಶರೀರವನ್ನು ಶೀಘ್ರವಾಗಿ ರವಾನೆ ಮಾಡುವುದಕ್ಕೆ ಅಲ್ಲಿನ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು...
ಕಿರ್ಪಾಲ್ ಸಿಂಗ್
ಕಿರ್ಪಾಲ್ ಸಿಂಗ್

ನವದೆಹಲಿ: ಪಾಕಿಸ್ತಾನದ ಜೈಲಿನಲ್ಲಿ ಸಾವನ್ನಪ್ಪಿದ ಭಾರತೀಯ ಕಿರ್ಪಾಲ್ ಸಿಂಗ್ ನ ಪಾರ್ಥಿವ ಶರೀರವನ್ನು ಶೀಘ್ರವಾಗಿ ರವಾನೆ ಮಾಡುವುದಕ್ಕೆ ಅಲ್ಲಿನ  ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ಭಾರತ ಸರ್ಕಾರ ರಾಯಭಾರಿ ಕಚೇರಿಗೆ ಸೂಚನೆ ನೀಡಿದೆ.

"ಕಿರ್ಪಾಲ್ ಸಿಂಗ್ ಮೃತ ದೇಹ ರವಾನೆ ಮಾಡುವುದರ ಬಗ್ಗೆ ಪಾಕಿಸ್ತಾನದ ವಿದೇಶಾಂಗ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಮಾತನಾಡಲು ಭಾರತೀಯ ರಾಯಭಾರಿ ಕಚೇರಿಗೆ ಸೂಚನೆ ನೀಡಲಾಗಿದ್ದು, ಕಿರ್ಪಾಲ್ ಸಿಂಗ್ ಸಾವಿಗೆ ಕಾರಣವಾದ ಅಂಶಗಳ ಬಗ್ಗೆಯೂ ಭಾರತೀಯ ಅಧಿಕಾರಿಗಳು ಪಾಕ್ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಪಡೆಯಲಿದ್ದಾರೆ ಎಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ತಿಳಿಸಿದ್ದಾರೆ. 

ಭಾರತೀಯ ಪ್ರಜೆಯಾಗಿರುವ (50) ಕಿರ್ಪಾಲ್ ಸಿಂಗ್ ಅವರು 1992ರಲ್ಲಿ ಪಾಕಿಸ್ತಾನದ ಒಳಗಿನ ವಾಘ ಗಡಿಯನ್ನು ದಾಟಿ ಹೋಗಿದ್ದ ಸಂದರ್ಭದಲ್ಲಿ ಅಲ್ಲಿನ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು. ಪಂಜಾಬ್ ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರ್ಪಾಲ್ ಸಿಂಗ್ ವಿರುದ್ಧ ಆರೋಪ ಹೊರಿಸಿ ಮರಣದಂಡನೆಯನ್ನು ವಿಧಿಸಲಾಗಿತ್ತು. ಬೇಹುಗಾರಿಕೆ ಆರೋಪದಡಿ ಬಂಧನಕ್ಕೊಳಗಾಗಿದ್ದ ಕಿರ್ಪಾಲ್ ಸಿಂಗ್ ಅವರು ಕಳೆದ 20 ವರ್ಷದಿಂದ ಪಾಕಿಸ್ತಾನದ ಲಾಹೋರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಕಿರ್ಪಾಲ್ ಸಿಂಗ್ ಏ.12 ರಂದು ಲಾಹೋರ್ ನ ಕಾಟ್ ಲಖ್ಪತ್ ಜೈಲಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ರಬ್ಜಿತ್ ಸಿಂಗ್ ಪ್ರಕರಣದಂತೆಯೇ ಕಿರ್ಪಾಲ್ ಸಿಂಗ್ ಪ್ರಕರಣದಲ್ಲೂ ಆಗಿದೆ. ಕಿರ್ಪಾಲ್ ರನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com