ಸಿಇಟಿ ನಂತರ ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟ

ದ್ವಿತೀಯ ಪಿಯು ಪರೀಕ್ಷೆ ಮೌಲ್ಯಮಾಪನ ಪ್ರಕ್ರಿಯೆ 12 ದಿನಗಳಲ್ಲಿ ಮುಕ್ತಾಯಗೊಳಿಸಿ ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು- ಸಚಿವ ಕಿಮ್ಮನೆ ರತ್ನಾಕರ್...
ಕಿಮ್ಮನೆ ರತ್ನಾಕರ್
ಕಿಮ್ಮನೆ ರತ್ನಾಕರ್

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಮೌಲ್ಯಮಾಪನ ಪ್ರಕ್ರಿಯೆ 12 ದಿನಗಳಲ್ಲಿ ಮುಕ್ತಾಯಗೊಳಿಸಿ ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ, ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ.
ಮೇ.2 ರ ವೇಳೆಗೆ ಫಲಿತಾಂಶಗಳು ಸಿದ್ಧಗೊಂಡಿರುತ್ತವೆ. ಆದರೆ ಮೇ.4 ,5 ,6 ರಂದು ಸಿಇಟಿ ಪರೀಕ್ಷೆ ಇರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಒತ್ತಡ ಉಂಟಾಗಬಾರದು ಎಂಬ ಕಾರಣಕ್ಕೆ, ಸಿಇಟಿ ಪರೀಕ್ಷೆಯ ನಂತರ ಫಲಿತಾಂಶ ಘೋಷಿಸುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರತಿಭಟನೆ ನಡೆಸುತ್ತಿರುವ ಪಿಯು ಪ್ರಾಧ್ಯಾಪಕರು ಮೌಲ್ಯಮಾಪನ ಬಹಿಷ್ಕಾರ ಮುಂದುವರೆಸಿದರೆ, ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಂಡಿದ್ದೇವೆ, ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ 12 ,000 ಅರ್ಹ ಪ್ರಾಧ್ಯಾಪಕರನ್ನು ಮೂಲ್ಯ ಮಾಪನ ಕಾರ್ಯಕ್ಕೆ ಮನವೊಲಿಕೆ ಮಾಡಲಾಗಿದ್ದು ಏ.14 ರಿಂದ ಮೌಲ್ಯಮಾಪನ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com