ನೀತಿ ಸಂಹಿತೆ ಉಲ್ಲಂಘನೆ ಆರೋಪ: ಮಮತಾ ಬ್ಯಾನರ್ಜಿಗೆ ಶೋಕಾಸ್ ನೊಟೀಸ್ ಜಾರಿ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದಡಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ಕೋಲ್ಕತಾ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದಡಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಜ್ಯದ ಅಸನ್ಸೋಲ್ ಪ್ರದೇಶವನ್ನು ಜಿಲ್ಲೆಯನ್ನಾಗಿ ಮಾಡುವುದಾಗಿ ತಮ್ಮ ಭಾಷಣದಲ್ಲಿ ಮಮತಾ ಬ್ಯಾನರ್ಜಿ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಮಮತಾ ಬ್ಯಾನರ್ಜಿಗೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ ಎಂದು ಚುನಾವಣಾ ಆಯೋಗದ ಆಯುಕ್ತ ನಸೀಮ್ ಜೈದಿ ತಿಳಿಸಿದ್ದಾರೆ. 
ಮಮತಾ ಬ್ಯಾನರ್ಜಿ ಅವರಿಂದ ಪ್ರತಿಕ್ರಿಯೆ ಬಂದ ನಂತರ ಕ್ರಮ ಕೈಗೊಳ್ಳುವುದರ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಚುನಾವಣಾ ಆಯುಕ್ತ ಜೈದಿ ಹೇಳಿದ್ದಾರೆ. ಆದರೆ ಚುನಾವಣಾ ಆಯೋಗದ ನೊಟೀಸ್ ಗೆ ಪ್ರತಿಕ್ರಿಯೆ ನೀಡಿರುವ ಮಮತಾ ಬ್ಯಾನರ್ಜಿ, ನಾನು ಹೇಳಿದ್ದನ್ನೇ ಮತ್ತೆ 100 ಬಾರಿ ಹೇಳುತ್ತೇನೆ, ಆಯೋಗ ಏನು ಮಾಡಿಕೊಳ್ಳಲು ಸಾಧ್ಯವೋ ಮಾಡಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com