ಪಾಕ್ ಹೇಳಿಕೆಯನ್ನು ತಿರಸ್ಕರಿಸಿದ ಕಿರ್ಪಾಲ್ ಸಿಂಗ್ ಕುಟುಂಬಸ್ಥರು

ಪಾಕಿಸ್ತಾನದ ಸೆರೆವಾಸದಲ್ಲಿದ್ದ ಭಾರತೀಯ ಪ್ರಜೆ ಕಿರ್ಪಾಲ್ ಸಿಂಗ್ ಅವರ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಪಾಕಿಸ್ತಾನ ಸರ್ಕಾರ ನೀಡಿದ್ದ ಹೇಳಿಕೆಯನ್ನು ಕಿರ್ಪಾಲ್ ಸಿಂಗ್...
ಕಿರ್ಪಾಲ್ ಸಿಂಗ್
ಕಿರ್ಪಾಲ್ ಸಿಂಗ್

ಮುಸ್ತಾಫಾಬಾದ್: ಪಾಕಿಸ್ತಾನದ ಸೆರೆವಾಸದಲ್ಲಿದ್ದ ಭಾರತೀಯ ಪ್ರಜೆ ಕಿರ್ಪಾಲ್ ಸಿಂಗ್ ಅವರ ಅನುಮಾನಾಸ್ಪದ ಸಾವು ಪ್ರಕರಣ ಸಂಬಂಧ ಪಾಕಿಸ್ತಾನ ಸರ್ಕಾರ ನೀಡಿದ್ದ ಹೇಳಿಕೆಯನ್ನು ಕಿರ್ಪಾಲ್ ಸಿಂಗ್ ಅವರ ಕುಟುಂಬಸ್ಥರು ಶುಕ್ರವಾರ ತಿರಸ್ಕರಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಪಾಕಿಸ್ತಾನ ಜೈಲಿನಲ್ಲಿ ಕಿರ್ಪಾಲ್ ಸಿಂಗ್ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಕಿರ್ಪಾಲ್ ಅವರ ಸಾವು ಕುರಿತಂತೆ ಹಲವು ಅನುಮಾನಗಳು ಮೂಡಿದ್ದವು. ಅಲ್ಲದೆ, ಪಾಕ್ ಅಧಿಕಾರಿಗಳೇ ಕಿರ್ಪಾಲ್ ಅವರನ್ನು ಹತ್ಯೆ ಮಾಡಿದ್ದಾರೆಂಬ ಆರೋಪಗಳು ಕೇಳಿಬಂದಿದ್ದವು. ನಂತರ ಈ ಕುರಿತಂತೆ ಸ್ಪಷ್ಟನೆ ನೀಡಿದ್ದ ಪಾಕ್, ಕಿರ್ಪಾಲ್ ಅವರು ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದರು ಎಂದು ಹೇಳಿತ್ತು.

ಇದೀಗ ಪಾಕಿಸ್ತಾನದ ಹೇಳಿಕೆಯನ್ನು ಕಿರ್ಪಾಲ್ ಸಿಂಗ್ ಅವರ ಕುಟುಂಬಸ್ಥರು ತಿರಸ್ಕರಿಸಿದ್ದು, ಕಿರ್ಪಾಲ್ ಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದರು ಎಂಬುದನ್ನು ನಾವು ಹೇಗೆ ನಂಬಲು ಸಾಧ್ಯ. ನಮಗೆ ಕಿರ್ಪಾಲ್ ಮೃತ ದೇಹ ಬೇಕು. ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ಮಾಡಬೇಕೆಂದು ಆಗ್ರಹಿಸಿದ್ದಾರೆ.

ಭಾರತೀಯ ಪ್ರಜೆಯಾಗಿರುವ (50) ಕಿರ್ಪಾಲ್ ಸಿಂಗ್ ಅವರು 1992ರಲ್ಲಿ ಪಾಕಿಸ್ತಾನದ ಒಳಗಿನ ವಾಘ ಗಡಿಯನ್ನು ದಾಟಿ ಹೋಗಿದ್ದ ಸಂದರ್ಭದಲ್ಲಿ ಅಲ್ಲಿನ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು.

ಪಂಜಾಬ್ ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರ್ಪಾಲ್ ಸಿಂಗ್ ವಿರುದ್ಧ ಆರೋಪ ಹೊರಿಸಿ ಮರಣದಂಡನೆಯನ್ನು ವಿಧಿಸಲಾಗಿತ್ತು. ಬೇಹುಗಾರಿಕೆ ಆರೋಪದಡಿ ಬಂಧನಕ್ಕೊಳಗಾಗಿದ್ದ ಕಿರ್ಪಾಲ್ ಸಿಂಗ್ ಅವರು ಕಳೆದ 20 ವರ್ಷದಿಂದ ಪಾಕಿಸ್ತಾನದ ಲಾಹೋರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು.

ಕಿರ್ಪಾಲ್ ಸಿಂಗ್ ಏ.11 ರಂದು ಲಾಹೋರ್ ನ ಕಾಟ್ ಲಖ್ಪತ್ ಜೈಲಿನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ರಬ್ಜಿತ್ ಸಿಂಗ್ ಪ್ರಕರಣದಂತೆಯೇ ಕಿರ್ಪಾಲ್ ಸಿಂಗ್ ಪ್ರಕರಣದಲ್ಲೂ ಆಗಿದೆ. ಕಿರ್ಪಾಲ್ ರನ್ನು ಹತ್ಯೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com