ಫೈನಲ್ ಹಂತ ತಲುಪಿದ ರಫೆಲ್ ಯುದ್ದ ವಿಮಾನ ಖರೀದಿ ಒಪ್ಪಂದ

ಭಾರತ ಮತ್ತು ಫ್ರಾನ್ಸ್‌ ನಡುವಣ ರಫೆಲ್ ಯುದ್ಧ ವಿಮಾನಗಳ ಖರೀದಿಗೆ ಸಂಬಂಧಿಸಿದಂತೆ ಮಾತುಕತೆ ನಿರ್ಣಾಯಕ ಹಂತಕ್ಕೆ ತಲುಪಿದ್ದು, ಯಾವುದೇ ಕ್ಷಣದಲ್ಲಿ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ:  ಭಾರತ ಮತ್ತು ಫ್ರಾನ್ಸ್‌ ನಡುವಣ ರಫೆಲ್ ಯುದ್ಧ ವಿಮಾನಗಳ ಖರೀದಿಗೆ ಸಂಬಂಧಿಸಿದಂತೆ ಮಾತುಕತೆ ನಿರ್ಣಾಯಕ ಹಂತಕ್ಕೆ ತಲುಪಿದ್ದು, ಯಾವುದೇ ಕ್ಷಣದಲ್ಲಿ ಒಪ್ಪಂದಕ್ಕೆ ಸಹಿ ಬೀಳುವ ಸಾಧ್ಯತೆಯಿದೆ.

36 ಯುದ್ಧ ವಿಮಾನಗಳ ಖರೀದಿಗೆ ಸಂಬಂಧಿಸಿದ ಒಪ್ಪಂದ ಇನ್ನೂ ಅಂತಿಮಗೊಂಡಿಲ್ಲ. ಇದೀಗ ನಿರ್ಣಾಯಕ ಹಂತ ತಲುಪಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್‌ ಅಧ್ಯಕ್ಷ ಫ್ರಾಂಸ್ವಾ ಒಲಾಂಡ್‌ ಅವರು ಮೂರು ತಿಂಗಳ ಹಿಂದೆ ಈ ಬಗ್ಗೆ ಕರಡು ಒಪ್ಪಂದಕ್ಕೆ ಸಹಿ ಹಾಕಿದ್ದರು.

ಒಪ್ಪಂದದ ಒಟ್ಟು ಮೊತ್ತವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಭಾರತ ಪ್ರಯತ್ನಿಸುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಫ್ರಾನ್ಸ್‌ ಜತೆ ಹಲವು ಸುತ್ತುಗಳ ಚರ್ಚೆ ನಡೆಸಿದೆ. ವಿಮಾನದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಲು ಭಾರತ ಬಯಸಿದ್ದು, ಅದಕ್ಕೆ ತಗಲುವ ವೆಚ್ಚವೂ ಸೇರಿದಂತೆ ಈ ಒಪ್ಪಂದದ ಒಟ್ಟು ಮೊತ್ತ  65 ಸಾವಿರ ಕೋಟಿ ಆಗಿದೆ. ಇದನ್ನು  59 ಸಾವಿರ ಕೋಟಿಗೆ ಕಡಿಮೆಗೊಳಿಸುವುದು ಭಾರತದ ಉದ್ದೇಶ’ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com