ಮಲ್ಯ ವಿಚಾರದಲ್ಲಿ ಎನ್'ಡಿಎ ಸರ್ಕಾರ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ: ಬಿಜೆಪಿ

ಮದ್ಯದ ದೊರೆ ವಿಜಯ್ ಮಲ್ಯ ವಿಚಾರದಲ್ಲಿ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಬಿಜೆಪಿ ಶನಿವಾರ ಹೇಳಿಕೊಂಡಿದೆ...
ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ (ಸಂಗ್ರಹ ಚಿತ್ರ)
ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ (ಸಂಗ್ರಹ ಚಿತ್ರ)

ನವದೆಹಲಿ: ಮದ್ಯದ ದೊರೆ ವಿಜಯ್ ಮಲ್ಯ ವಿಚಾರದಲ್ಲಿ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಬಿಜೆಪಿ ಶನಿವಾರ ಹೇಳಿಕೊಂಡಿದೆ.

ಬ್ಯಾಂಕ್ ಗಳಿಗೆ ಭಾರಿ ಮೊತ್ತದ ಸಾಲ ಬಾಕಿ ಉಳಿಸಿ ದೇಶ ಬಿಟ್ಟು ವಿದೇಶಕ್ಕೆ ಹಾರಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ಕೇಂದ್ರ ಸರ್ಕಾರ ನಾಲ್ಕು ವಾರಗಳ ಅವಧಿಗೆ ಅಮಾನತಿನಲ್ಲಿರಿಸಿ, ರದ್ದುಪಡಿಸುವ ಎಚ್ಚರಿಕೆಯನ್ನು ಮಲ್ಯ ಅವರಿಗೆ ನಿನ್ನೆಯಷ್ಟೇ ನೀಡಿತ್ತು.

ಈ ಹಿನ್ನೆಲೆಯಲ್ಲಿ ಮಾತನಾಡಿರುವ ಬಿಜೆಪಿ ನಾಯಕ ಮುಖ್ತಾರ್ ಅಬ್ಬಾಸ್ ನಖ್ವಿ ಅವರು, ಅಧಿಕಾರದ ಮದದಲ್ಲಿ ಬಡಜನರ ಹಣವನ್ನು ಹೊತ್ತೊಯ್ದಿರುವ ಮಲ್ಯ ಅವರಿಗೆ ಶಿಕ್ಷೆಯಾಗಬೇಕಿದೆ. ಅವರ ವಿರುದ್ಧ ಮೃದು ಧೋರಣೆಯನ್ನು ಎಂದಿಗೂ ತೋರಬಾರದು. ಮಲ್ಯ ಮತ್ತೆ ಭಾರತಕ್ಕೆ ಹಿಂದಿರುಗಿ ಬರಬೇಕು. ಕಾನೂನು ಎದುರಿಬೇಕೆಂದು ಹೇಳಿದ್ದಾರೆ.

ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಸರ್ಕಾರ ಒಳ್ಳೆಯ ದಿಕ್ಕಿನಲ್ಲಿ ಸಾಗುತ್ತಿರುವುದನ್ನು ದಯವಿಟ್ಟು ಕಾದು ನೋಡಿ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com