ಬಿಹಾರದಲ್ಲಿ ಟ್ರಕ್ ಗೆ ಕಾರು ಡಿಕ್ಕಿ: 5 ಆಂಧ್ರ ತೀರ್ಥಯಾತ್ರಿಗಳ ಸಾವು

ತೀರ್ಥಯಾತ್ರೆಗೆ ತೆರಳಿದ್ದವರ ಕಾರು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಆಂಧ್ರ ಮೂಲದ ಐವರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ...
ಅಪಘಾತ
ಅಪಘಾತ
Updated on: 

ಬಿಹಾರ: ತೀರ್ಥಯಾತ್ರೆಗೆ ತೆರಳಿದ್ದವರ ಕಾರು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಆಂಧ್ರ ಮೂಲದ ಐವರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಆಂಧ್ರದ ಪಶ್ಚಿಮ ಗೋದಾವರಿ ಮೂಲದ 7 ಮಂದಿ ಎಸ್ಯುವಿ ಕಾರಿನಲ್ಲಿ ಗಯಾದಿಂದ ವಾರಣಾಸಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬಿಹಾರದ ಕೈಮೂರ್ ಜಿಲ್ಲೆಯ ಕೌಡಿಗ್ರಾಮ್ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರಕ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮಹನಿಯಾ ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ತಿಳಿಸಿದ್ದಾರೆ.

ಮೃತರನ್ನು ಆಂಧ್ರ ಮೂಲದ ಸತ್ಯನಾರಾಯಣ(50), ಪವನ್ ಕುಮಾರ್(25) ಪದ್ಮವತಿ ದೇವಿ(70) ಶ್ರೀರಾಮ್(55) ಮತ್ತು ರುಕ್ಮಿಣಿ ದೇವಿ(50) ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ ತೀರ್ವವಾಗಿ ಗಾಯಗೊಂಡಿರುವ 50 ವರ್ಷದ ಕಮ್ಲಾವತಿ ದೇವಿ ಹಾಗೂ 55 ಸರಸ್ವತಿ ದೇವಿಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com