ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ 2016: 2ನೇ ಹಂತದ ಮತದಾನ ಆರಂಭ

ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಎರಡನೇ ಹಂತದ ವಿಧಾನಸಭಾ ಚುನಾವಣೆ ಭಾನುವಾರ ಆರಂಭಗೊಂಡಿದೆ...
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತ ಹಾಕಲು ಸಾಲಿನಲ್ಲಿ ನಿಂತಿರುವ ಮಹಿಳೆಯರು
ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತ ಹಾಕಲು ಸಾಲಿನಲ್ಲಿ ನಿಂತಿರುವ ಮಹಿಳೆಯರು

ಕೋಲ್ಕತಾ: ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಎರಡನೇ ಹಂತದ ವಿಧಾನಸಭಾ ಚುನಾವಣೆ ಭಾನುವಾರ ಆರಂಭಗೊಂಡಿದೆ.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಜತೆಗೂಡಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕಠಿಣ ಸ್ಪರ್ಧೆ ಎದುರಿಸುತ್ತಿದ್ದಾರೆ. ಪಶ್ಚಿಮ ಬಂಗಾಳದ 56 ಕ್ಷೇತ್ರಗಳಿಗೆ ವಿಧಾನಸಭೆ ಚುನಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಇಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದೆ.

1.22 ಕೋಟಿ (1,21,74,947) ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದು, ಮತದಾನ ಪ್ರಕ್ರಿಯೆಗೆ 13,645 ಮತಗಟ್ಟೆಗಳನ್ನು ನಿಯೋಜಿಸಲಾಗಿದೆ. ಇದರಂತೆ ಇಂದು ನಡೆಯುವ ಮತದಾನದಲ್ಲಿ 33 ಮಹಿಳೆಯರು ಸೇರಿದಂತೆ 383 ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ.

ಅಲಿಪುರದೌರ್ ಜಿಲ್ಲೆಯ 5 ಕ್ಷೇತ್ರಗಳು, ಜಲ್ಪೈಗುರಿ 7, ಉತ್ತರ ದೀನಜ್ಪುರ 9, ಡಾರ್ಜಿಲಿಂಗ್ 6, ದಕ್ಷಿಣ ದೀನಜ್ಪುರ 6, ಮಾಲ್ಡಾದ 12 ಹಾಗೂ ದಕ್ಷಿಣ ಬಂಗಾಳ ಜಿಲ್ಲೆದ 11 ಕ್ಷೇತ್ರಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಸುಮಾರು 1 ತಿಂಗಳ ಕಾಲ ಈ ಚುನಾವಣೆ ಪ್ರಕ್ರಿಯೆ ನಡೆಯಲಿದ್ದು, ಈಗಾಗಲೇ ಏಪ್ರಿಲ್ 4 ಮತ್ತು 11 ರಂದು ಎರಡು ದಿನಗಳು ನಡೆದ ಚುನಾವಣೆಯಲ್ಲಿ 294 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ಅಂತಿಮಗೊಂಡಿದೆ. ಇಂದು ಕೂಡ 56 ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮುಂದಿನ ಏ.21, 25, 30 ಹಾಗೂ ಮೇ 5 ರಂದು ಉಳಿದ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

2011ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಕ್ಷದ ಜೊತೆ ಕಾಂಗ್ರೆಸ್ ಕೈ ಜೋಡಿಸಿತ್ತು. ಅಂದು ನಡೆದ ಚುನಾವಣೆಯಲ್ಲಿ ರಾಜ್ಯದಲ್ಲಿ 34 ವರ್ಷಗಳ ಎಡಪಕ್ಷಗಳ ಆಳ್ವಿಕೆ ಅಂತಿಮಗೊಂಡಿತ್ತು. ನಂತರ ದಿನಗಳಲ್ಲಿ ಟಿಎಂಸಿ ಪಕ್ಷದ ಜತೆಗಿನ ಸಂಬಂಧವನ್ನು ಕಾಂಗ್ರೆಸ್ ಕಡಿದುಕೊಂಡಿತ್ತು. ಇದೀಗ ಎಡಪಕ್ಷಗಳ ಜೊತೆ ಕೈಜೋಡಿಸಿರುವ ಕಾಂಗ್ರೆಸ ಪಕ್ಷ ಮೈತ್ರಿ ಮಾಡಿಕೊಂಡು ಮಮತಾ ಬ್ಯಾನರ್ಜಿಯವರನ್ನು ಸೋಲಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com