ಯೋಧನಿಂದ ಲೈಂಗಿಕ ಕಿರುಕುಳ ಆರೋಪ ಪ್ರಕರಣ: ಅಪ್ರಾಪ್ತೆಯಿಂದ ಹೇಳಿಕೆ ಪುನರುಚ್ಚಾರ

ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಅಪ್ರಾಪ್ತೆಯೊಬ್ಬಳಿಗೆ ಯೋಧನೊಬ್ಬ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿ ನ್ಯಾಯಾಲಯದಲ್ಲಿ ಹೇಳಿಕೆಯನ್ನು ನೀಡಿದ್ದು...
ಜಮ್ಮುವಿನಲ್ಲಿ ನಿರ್ಮಾಣವಾಗಿದ್ದ ಉದ್ವಿಗ್ನ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್
ಜಮ್ಮುವಿನಲ್ಲಿ ನಿರ್ಮಾಣವಾಗಿದ್ದ ಉದ್ವಿಗ್ನ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದ ಸೇನಾ ಮುಖ್ಯಸ್ಥ ದಲ್ಬೀರ್ ಸಿಂಗ್

ಶ್ರೀನಗರ: ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಅಪ್ರಾಪ್ತೆಯೊಬ್ಬಳಿಗೆ ಯೋಧನೊಬ್ಬ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿ ನ್ಯಾಯಾಲಯದಲ್ಲಿ ಹೇಳಿಕೆಯನ್ನು ನೀಡಿದ್ದು, ಈ ಹಿಂದೆ ನೀಡಿದ್ದ ಹೇಳಿಕೆಯನ್ನೇ ಪುನರ್ ಉಚ್ಚರಿಸಿದ್ದಾಳೆಂದು ತಿಳಿದುಬಂದಿದೆ.

ಯೋಧನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಆರೋಪ ಪ್ರಕರಣ ಜಮ್ಮುವಿನಲ್ಲಿ ಸಾಕಷ್ಟು ಉದ್ವಿಗ್ನ ವಾತಾವರಣವನ್ನು ನಿರ್ಮಾಣ ಮಾಡಿತ್ತು. ಸ್ಥಳೀಯರ ಆಕ್ರೋಶ ಇದೀಗ ತಣ್ಣಗಾಗಿದ್ದು, ಗಲಭೆ ಪೀಡಿತ ಪ್ರದೇಶವನ್ನು ಸೇನೆ ನಿಯಂತ್ರಣಕ್ಕೆ ಪಡೆದುಕೊಂಡಿದೆ.

ಪ್ರಕರಣ ಸಂಬಂಧ ಯೋಧರ ವಿರುದ್ಧ ಸಾಕಷ್ಟು ಆರೋಪಗಳು ವ್ಯಕ್ತವಾಗುತ್ತಿದ್ದ ಬೆನ್ನಲ್ಲೇ ಕಿರುಕುಳಕ್ಕೊಳಗಾದ ಬಾಲಕಿ ಹೇಳಿಕೆಯೊಂದನ್ನು ನೀಡಿದ್ದಳು. ಈ ಹೇಳಿಕೆ ಪ್ರಕರಣಕ್ಕೆ ಹೊಸ ತಿರುವನ್ನು ನೀಡಿತ್ತು. ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸುವುದಕ್ಕೂ ಮುನ್ನ ಬಾಲಕಿಯ ಹೇಳಿಕೆಯನ್ನು ಅಧಿಕಾರಿಗಳು ದಾಖಲು ಮಾಡಿಕೊಂಡಿದ್ದರು,

ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ಬಾಲಕಿ ತನ್ನ ಹೇಳಿಕೆಯಲ್ಲಿ ಯೋಧನೊಬ್ಬ ಕಿರುಕುಳ ನೀಡಿದ್ದನೆಂಬ ಆರೋಪವನ್ನು ಅಲ್ಲಗೆಳೆದಿದ್ದಳು. ಅಲ್ಲದೆ, ನನಗೆ ಯೋಧರು ಯಾವುದೇ ರೀತಿಯ ಲೈಂಗಿಕ ಕಿರುಕುಳ ನೀಡಿಲ್ಲ. ನಾನು ಸಾರ್ವಜನಿಕ ಶೌಚಾಲಯಕ್ಕೆ ಹೋಗಿದ್ದ ವೇಳೆ ಅಲ್ಲಿ ಯಾವುದೇ ಯೋಧರು ಇರಲಿಲ್ಲ. ಆದರೆ, ಶಾಲೆಯ ಸಮವಸ್ತ್ರ ಧರಿಸಿ ಆಗಮಿಸಿದ್ದ ಇಬ್ಬರು ವ್ಯಕ್ತಿಗಳು ನನ್ನ ಮೇಲೆ ದಾಳಿ ನಡೆಸಿ, ಲೈಂಗಿಕವಾಗಿ ಕಿರುಕುಳ ನೀಡಿದ್ದರು ಎಂದು ಹೇಳಿಕೊಂಡಿದ್ದಳು.

ನಂತರ ಬಾಲಕಿ ನೀಡಿದ್ದ ಹೇಳಿಕೆಯನ್ನು ತಿರಸ್ಕರಿಸಿದ್ದ ಆಕೆಯ ತಾಯಿ, ಹೇಳಿಕೆಯನ್ನು ಬದಲಿಸುವಂತೆ ನನ್ನ ಮಗಳ ಮೇಲೆ ಒತ್ತಡ ಹೇರಲಾಗಿದೆ ಎಂದು ಆರೋಪ ವ್ಯಕ್ತಪಡಿಸಿದ್ದರು.

ಇದರಂತೆ ನಿನ್ನೆ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆಯೂ ಬಾಲಕಿ ಇದೇ ಹೇಳಿಯನ್ನು ಪುನರ್ ಉಚ್ಛರಿಸಿದ್ದಾಳೆಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಪ್ರಕರಣ ಸಂಬಂಧ ಸೇನಾ ಮುಖ್ಯಸ್ಥ ಜನರಲ್ ದಲ್ಬೀರ್ ಸಿಂಗ್ ಅವರು ಜಮ್ಮುವಿಗೆ ಭೇಟಿ ನೀಡಿದ್ದು, ಪರಿಸ್ಥಿತಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಘಟನೆ ಕುರಿತಂತೆ ಸಂಪೂರ್ಣ ಮಾಹಿತಿಯನ್ನು ಪಡೆದಿದ್ದಾರೆಂದು ಸೇನಾ ವಕ್ತಾರ ಕರ್ನಲ್ ಎಸ್.ಡಿ. ಗೋಸ್ವಾಮಿಯವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com