ಅಕ್ರಮ ಪಟಾಕಿ ತಯಾರಿಕಾ ಕೇಂದ್ರದಲ್ಲಿ ಪಟಾಕಿ ಸಿಡಿದು 2 ಸಾವು, ಹಲವರಿಗೆ ಗಾಯ

ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಗುರವಂ ಗ್ರಾಮದಲ್ಲಿರುವ ಮನೆಯೊಂದರಲ್ಲಿ ಪಟಾಕಿ ಸಿಡಿದು ಇಬ್ಬರು ಸಾವಿಗೀಡಾಗಿರುವ ಘಟನೆ ಸೋಮವಾರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಶ್ರೀಕಾಕುಲಂ: ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಗುರವಂ ಗ್ರಾಮದಲ್ಲಿರುವ ಮನೆಯೊಂದರಲ್ಲಿ ಪಟಾಕಿ ಸಿಡಿದು ಇಬ್ಬರು ಸಾವಿಗೀಡಾಗಿರುವ ಘಟನೆ ಸೋಮವಾರ ವರದಿಯಾಗಿದೆ. ಈ ಘಟನೆಯಲ್ಲಿ ಎಂಟಕ್ಕಿಂತಲೂ  ಹೆಚ್ಚು ಮಂದಿಗೆ  ಗಾಯಗಳಾಗಿವೆ ಎಂದು ಬಲ್ಲಮೂಲಗಳು ಹೇಳಿವೆ. 
ಈ ಮನೆಯಲ್ಲಿ ಅಕ್ರಮವಾಗಿ ಪಟಾಕಿ ತಯಾರಿಕಾ ಕೇಂದ್ರ ಕಾರ್ಯವೆಸಗುತ್ತಿತ್ತು ಎಂದು ಹೇಳಲಾಗುತ್ತಿದೆ. ಮನೆಯಲ್ಲಿ ಬೆಂಕಿ ಉರಿಸಿದ ವೇಳೆ ಕಿಡಿಯೊಂದು ಪಟಾಕಿಗೆ ತಗುಲಿ ಈ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳಲ್ಲಿ ಉಲ್ಲೇಖಿಸಲಾಗಿದೆ.
ಈ ಗ್ರಾಮದಲ್ಲಿರುವ ಹಲವಾರು ಮನೆಗಳಲ್ಲಿ ಅಕ್ರಮವಾಗಿ ಪಟಾಕಿ ತಯಾರಿಸಲಾಗುತ್ತಿದೆ ಎಂಬ ವಿಷಯವೂ ಈ ಘಟನೆಯೊಂದಿಗೆ ಬೆಳಕಿಗೆ ಬಂದಿದೆ.  ಅಧಿಕಾರಿಗಳಿಗೆ ಈ ಬಗ್ಗೆ ಗೊತ್ತಿದ್ದರೂ ಅವರ್ಯಾರೂ ಸರಿಯಾದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಅಲ್ಲಿನ ಸ್ಥಳೀಯರು ದೂರಿದ್ದಾರೆ.
ವಾರದ ಹಿಂದೆಯಷ್ಟೇ ಕೇರಳದ ಕೊಲ್ಲಂ ಪರವೂರ್ ಪುಟ್ಟಿಂಗಲ್ ದೇವಿ ಜಾತ್ರೆಯಲ್ಲಿ ಸಂಭವಿಸಿದ ಪಟಾಕಿ ದುರಂತದಲ್ಲಿ ನೂರಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com