ಮಳೆಗಾಗಿ ಮೊರೆಯಿಡುತ್ತಿರುವ ಇಂಧನ ಇಲಾಖೆ

ರೈತರು ಮಾತ್ರವಲ್ಲ, ರೈತರಿಗೆ, ರಾಜ್ಯಕ್ಕೆ ವಿದ್ಯುತ್ ಪೂರೈಕೆ ಮಾಡುವ ಇಂಧನ ಇಲಾಖೆಯು ಸಹ ಈಗ ಮಳೆಗಾಗಿ ಮೊರೆಯಿಡುತ್ತಿದೆ.
ವಿದ್ಯುತ್ ಪೂರೈಕೆ ಸಂಸ್ಥೆಗಳೊಂದಿಗೆ ಇಂಧನ ಸಚಿವರ ಸಭೆ
ವಿದ್ಯುತ್ ಪೂರೈಕೆ ಸಂಸ್ಥೆಗಳೊಂದಿಗೆ ಇಂಧನ ಸಚಿವರ ಸಭೆ

ಬೆಂಗಳೂರು: ರೈತರು ಮಾತ್ರವಲ್ಲ, ರೈತರಿಗೆ, ರಾಜ್ಯಕ್ಕೆ ವಿದ್ಯುತ್ ಪೂರೈಕೆ ಮಾಡುವ ಇಂಧನ ಇಲಾಖೆ ಸಹ ಈಗ ಮಳೆಗಾಗಿ ಮೊರೆಯಿಡುತ್ತಿದೆ.
ನಿರೀಕ್ಷಿತ ಪ್ರಮಾಣದಲ್ಲಿ ಮುಂಗಾರನ್ನು ಎದುರುನೋಡುತ್ತಿರುವ ಇಂಧನ ಇಲಾಖೆ, ಮೇ ತಿಂಗಳ ಅಂತ್ಯದ ವರೆಗೂ ಸಾಕಷ್ಟು ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಂಡಿದೆ. ರಾಜ್ಯದ ಎಲ್ಲಾ ಐದು ವಿದ್ಯುತ್ ಪೂರೈಕೆ ಸಂಸ್ಥೆಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಇಂಧನ ಸಚಿವ ಡಿಕೆ ಶಿವಕುಮಾರ್, ಎಲ್ಲಾ ಉಷ್ಣ ಶಕ್ತಿ ವಿದ್ಯುತ್ ಸ್ಥಾವರ( ಥರ್ಮಲ್ ವಿದ್ಯುತ್ ಉತ್ಪಾದನಾ ಘಟಕ) ಗಳಲ್ಲಿ 15 -20 ದಿನಗಳಿಗಾಗುವಷ್ಟು ಕಲ್ಲಿದ್ದಲು ದಾಸ್ತಾನು ಇದೆ. ರಾಯಚೂರು ಉಷ್ಣ ವಿದ್ಯುತ್ ಸ್ಥಾವರದಲ್ಲಿ 20 ದಿನಗಳಿಗೆ ಆಗುವಷ್ಟು ನೀರಿದೆ. ಬಳ್ಳಾರಿ ಥರ್ಮಲ್ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ 50 ದಿನಗಳಿಗೆ ಸಾಕಾಗುವಷ್ಟು ಸಂಗ್ರಹಣೆ ಇದೆ ಎಂದು ಮಾಹಿತಿ ನೀಡಿದ್ದಾರೆ.
ಕುಡಿಯುವ ನೀರು ಪೂರೈಕೆಗಾಗಿ ವಿದ್ಯುತ್ ಸಂಪರ್ಕ ನೀಡಲು ವಿಶೇಷ ಆದೇಶವನ್ನು ಹೊರಡಿಸಲಾಗಿದೆ. ಕುಡಿಯುವ ನೀರಿಗೆ ಸಂಬಂಧಿಸಿದ ಕಾಮಗಾರಿಗಳಿಗೆ ವಿದ್ಯುತ್ ಪೂರೈಕೆ ಮಾಡಲು ಅರ್ಜಿ ಸಲ್ಲಿಸಿದ ತಕ್ಷಣವೇ ಆದೇಶ ನೀಡಲಾಗುತ್ತಿದೆ, ವಿದ್ಯುತ್ ಪೂರೈಕೆ ಬೇಡಿಕೆ ಈಡೇರಿಸುವುದಕ್ಕೆ ಸಾಧ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಲೋಡ್ ಶೆಡ್ಡಿಂಗ್  ಮೊರೆ ಹೋಗುವ ಅಗತ್ಯವಿಲ್ಲ ಎಂದು ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಒಂದು ವೇಳೆ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಬರದೇ ಇದ್ದರೆ ವಿದ್ಯುತ್ ಪೂರೈಕೆ ಕೊರತೆಯನ್ನು ಎದುರಿಸಲು 1000 ಮೆಗಾವ್ಯಾಟ್ ವಿದ್ಯುತ್ ಪೂರೈಕೆಗೆ ಟೆಂಡರ್ ಕರೆಯುವ ಆಯ್ಕೆಯನ್ನು ಈಗಾಗಲೇ ಪರಿಗಣಿಸಲಾಗಿದೆ ಇನ್ನು ಪಾವಗಡದ ಸೋಲಾರ್ ಪಾರ್ಕ್ ನಿಂದ ರಾಜ್ಯಕ್ಕೆ 500 ಮೆಗಾ ವ್ಯಾಟ್ ಸೋಲಾರ್ ವಿದ್ಯುತ್ ನ್ನು ಪೂರೈಕೆ ಮಾಡಲು ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಶನ್ ಒಪ್ಪಿಗೆ ಸೂಚಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com