ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಪ್ರಧಾನಿ ಮೋದಿ ಭೇಟಿಗೂ 1 ಗಂಟೆ ಮುನ್ನ ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ

ಕತ್ರಾಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ 1 ಗಂಟೆಗೆ ಮುನ್ನಾ ಪಾಕಿಸ್ತಾನ ಸೇನಾಪಡೆ ಕದನ ವಿರಾಮ ಉಲ್ಲಂಘನೆ...
ಜಮ್ಮು: ಕತ್ರಾಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡುವ 1 ಗಂಟೆಗೆ ಮುನ್ನಾ ಪಾಕಿಸ್ತಾನ ಸೇನಾಪಡೆ ಕದನ ವಿರಾಮ ಉಲ್ಲಂಘನೆ ಮಾಡಿ ಗುಂಡಿನ ದಾಳಿ ನಡೆಸಿದೆ. 
ಅಂತರಾಷ್ಟ್ರೀಯ ಗಡಿ ಭಾಗವಾದ ಸಾಂಬಾ ಜಿಲ್ಲೆಯಲ್ಲಿ ಪಾಕಿಸ್ತಾನದ ಪಡೆ 4ರಿಂದ 5 ಸುತ್ತು ಗುಂಡು ಹಾರಿಸಿದೆ. ಘಟನೆಯಿಂದ ಯಾರು ಗಾಯಗೊಂಡಿಲ್ಲ ಹಾಗೂ ಯಾವುದೇ ಹಾನಿ ವರದಿಯಾಗಿಲ್ಲ ಎಂದು ಬಿಎಸ್ ಎಫ್ ಅಧಿಕಾರಿ ತಿಳಿಸಿದ್ದಾರೆ. 
ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತಾ ವೈಷ್ಣೋ ದೇವಿ ವಿಶ್ವವಿದ್ಯಾಲಯಕ್ಕೆ ಭೇಟಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿ, ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Related Stories

No stories found.

Advertisement

X
Kannada Prabha
www.kannadaprabha.com