ಜಮ್ಮು-ಕಾಶ್ಮೀರದಲ್ಲಿ ಮಾತಾ ವೈಷ್ಣೋದೇವಿ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಲಿರುವ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರಕ್ಕೆ ಒಂದು ದಿನದ ಭೇಟಿ ನೀಡಲಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ಮಾಡಲಿದ್ದಾರೆ.
ನರೇಂದ್ರ ಮೋದಿ
ನರೇಂದ್ರ ಮೋದಿ

ಜಮ್ಮು: ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರಕ್ಕೆ ಒಂದು ದಿನದ ಭೇಟಿ ನೀಡಲಿದ್ದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ, ವಿಶ್ವವಿದ್ಯಾನಿಲಯದಲ್ಲಿ ಘಟಿಕೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಬೆಳಿಗ್ಗೆ 9 ಕ್ಕೆ ಜಮ್ಮು ವಿಮಾನ ನಿಲ್ದಾಣ ತಲುಪಲಿರುವ ಪ್ರಧಾನಿ ಮೋದಿ ಅವರನ್ನು ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ- ರಾಜ್ಯಪಾಲ ಎನ್ ಎನ್ ವೋಹ್ರಾ, ಜಿಲ್ಲಾಡಳಿತದ ಅಧಿಕಾರಿಗಳು ಬರಮಾಡಿಕೊಳ್ಳಲಿದ್ದಾರೆ. ನಂತರ ಕತ್ರಾದಲ್ಲಿರುವ ವೈಷ್ಣೋದೇವಿ  ದೇವಾಲಯಕ್ಕೆ ಪ್ರಧಾನಿ ಮೋದಿ ಸಿಎಂ ಮೆಹಬೂಬಾ ಮುಫ್ತಿ, ರಾಜ್ಯಪಲರೊಂದಿಗೆ ಭೇಟಿ ನೀಡಲಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಪ್ರಧಾನಿ ಶ್ರೀ ಮಾತಾ ವೈಷ್ಣೋದೇವಿ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಮಾತಾ ವೈಷ್ಣೋದೇವಿ ವಿಶ್ವವಿದ್ಯಾನಿಲಯದಲ್ಲಿ ನಡೆಯಲಿರುವ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಲಿದ್ದಾರೆ.
ಮಾತಾ ವೈಷ್ಣೋದೇವಿ ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸುಮಾರು 300 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ. ಪ್ರಧಾನಿ ಮೋದಿ ಅಧಿಕಾರ ವಹಿಸಿಕೊಂಡ ನಂತರ ಕತ್ರಾಗೆ ಇದು ಅವರ ಮೂರನೇ ಭೇಟಿಯಾಗಿದೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಜಮ್ಮುವಿನಲ್ಲಿ ಎಸ್ ಪಿಜಿ ಕಮಾಂಡೋಗಳನ್ನು ನಿಯೋಜಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com