ಅಂಡಮಾನ್ ನಲ್ಲಿ ಪ್ರಬಲ ಭೂಕಂಪನ; ರಿಕ್ಟರ್ ಮಾಪಕದಲ್ಲಿ 5.1ರಷ್ಟು ತೀವ್ರ ದಾಖಲು

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಬುಧವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.1ರಷ್ಟು ತೀವ್ರತೆ ದಾಖಲಾಗಿದೆ...
ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹ (ಸಂಗ್ರಹ ಚಿತ್ರ)
ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹ (ಸಂಗ್ರಹ ಚಿತ್ರ)

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಬುಧವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.1ರಷ್ಟು ತೀವ್ರತೆ ದಾಖಲಾಗಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಭೂಕಂಪನ ವಲಯದ ಸುಮಾರು 10 ಕಿ.ಮೀ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಗರ್ಭಶಾಸ್ತ್ರ  ಇಲಾಖೆ ಮಾಹಿತಿ ನೀಡಿದೆ. ಬುಧವಾರ ಬೆಳಗಿನ ಜಾವ ಸುಮಾರು 2 ಗಂಟೆ 2 ನಿಮಿಷದಲ್ಲಿ ಭೂಕಂಪನ ಸಂಭವಿಸಿದ್ದು, ಸಾವು-ನೋವಿನ ಕುರಿತು ಈ ವರೆಗೂ ಯಾವುದೇ ಮಾಹಿತಿಗಳು  ಲಭ್ಯವಾಗಿಲ್ಲ.

ಇಕ್ವೆಡಾರ್ ನಲ್ಲಿ ಸಂಭವಿಸಿದ ಭೀಕರ ಭೂಕಂಪನದಿಂದಾಗಿ ಈ ವರೆಗೂ ಸುಮಾರು 450 ಅಧಿಕ ಮಂದಿ ಸಾವನ್ನಪ್ಪಿದ್ದು, ನೂರಾರು ಕೋಟಿ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ. ಇದರ ಬೆನ್ನಲ್ಲೇ  ಭಾರತದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಭೂಕಂಪನ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಇನ್ನು ರಾಷ್ಟ್ರೀಯ ಭೂಗರ್ಭಶಾಸ್ತ್ರ ಇಲಾಖೆಯ ಅಧಿಕಾರಿಗಳು  ಅಭಿಪ್ರಾಯಪಟ್ಟಂತೆ ಭೂಕಂಪನ ಕೇಂದ್ರ ಬಿಂದು ದಾಖಲಾಗಿರುವ ಪ್ರದೇಶದಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಭೂಕಂಪನಗಳು ಸಂಭವಿಸುತ್ತಿರುತ್ತವೆ. ಇದರಿಂದ ಹೆಚ್ಚಿನ ಗಾಬರಿಯಾಗುವ  ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com